ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹೇಳಿಕೆ: ಸಂಸದ ನಳಿನ್ ಕಟೀಲ್ ಕ್ಷಮೆಯಾಚನೆ

ಮಂಗಳವಾರ, 3 ಜನವರಿ 2017 (16:18 IST)
ಕಾರ್ತಿಕ್‌ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು 10 ದಿನಗಳಲ್ಲಿ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯೆ ಬೆಂಕಿ ಹಚ್ಚಲು ನಮಗೂ ಗೊತ್ತು ಎಂಬ ವಿವಾದಾತ್ಮಕ ಹೇಳಿಕೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಕ್ಷಮೆಯಾಚಿಸಿದ್ದಾರೆ.
ಜಿಲ್ಲೆಯಲ್ಲಿ ಶಾಂತಿ ಕದಡುವ ಯಾವುದೇ ಉದ್ದೇಶ ನನ್ನ ಹೇಳಿಕೆಯಲ್ಲಿ ಇರಲಿಲ್ಲ. ಆದರೂ ನೋವಿನಿಂದ ಮಾತಿನ ಭರದಲ್ಲಿ ವ್ಯಕ್ತವಾದ ಕೆಲವು ಶಬ್ದಗಳ ಕುರಿತು ಈಗಾಗಲೇ ವಿಷಾದ ವ್ಯಕ್ತಪಡಿಸಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ. 
 
ಅಮಾಯಕ ಹಿಂದೂ ಯುವಕರ ಹತ್ಯೆಯಿಂದ ಜಿಲ್ಲೆಯ ಜನತೆ ಆತಂಕಕ್ಕೀಡಾಗಿದ್ದಾರೆ. ಕಾರ್ತಿಕ್‌ರಾಜ್ ಕೊಲೆ ನಡೆದು ಎರಡು ತಿಂಗಳಾದರೂ ಆರೋಪಿಗಳನ್ನು ಬಂಧಿಸಿಲ್ಲ. ಇದರಿಂದ ಸಹಜವಾಗಿಯೇ ಕಾರ್ಯಕರ್ತರಿಗೆ ನೋವಾಗಿದೆ ಎಂದು ತಿಳಿಸಿದರು.  
 
ಪಜೀರ್‌ನ ಕಾರ್ತಿಕ್‌ರಾಜ್ ಕೊಲೆ ಪ್ರಕರಣದ ಆರೋಪಿಗಳ ಪತ್ತೆಗೆ ಆಗ್ರಹಿಸಿ ಭಾನುವಾರ ಕೊಣಾಜೆ ಪೊಲೀಸ್ ಠಾಣೆ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್, ಕಾರ್ತಿಕ್‌ರಾಜ್ ಕೊಲೆ ಪ್ರಕರಣದ ಆರೋಪಿಗಳನ್ನು 10 ದಿನಗಳಲ್ಲಿ ಬಂಧಿಸದಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯೆ ಬೆಂಕಿ ಹಚ್ಚಲು ನಮಗೂ ಗೊತ್ತು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ