ಪೊಲೀಸರ ಮೇಲೆ ಸಂಸದ ಪ್ರತಾಪ ಸಿಂಹನ "ಪ್ರತಾಪ"

ಮಂಗಳವಾರ, 5 ಸೆಪ್ಟಂಬರ್ 2017 (13:13 IST)
ಫ್ರೀಡಂಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಮಫ್ತಿಯಲ್ಲಿದ್ದ ಪೊಲೀಸರನ್ನು ನೂಕಾಟ, ತಳ್ಳಾಟ ನಡೆಸಿದ ಘಟನೆ ವರದಿಯಾಗಿದೆ.
ಬಿಜೆಪಿ ಯುವಮೋರ್ಚಾದಿಂದ ಕರೆ ನೀಡಲಾಗಿದ್ದ ಮಂಗಳೂರು ಚಲೋ ಕಾರ್ಯಕ್ರಮಕ್ಕೆ ಪೊಲೀಸರು ಅಡ್ಡಿಪಡಿಸಿದಾಗ ಕಾರ್ಯಕರ್ತರು ಮತ್ತು ಪೊಲೀಸರು ಮಧ್ಯೆ ನೂಕಾಟ, ತಳ್ಳಾಟ ನಡೆದಿದೆ.
 
ಸಿಎಂ ಸಿದ್ದರಾಮಯ್ಯ ಹಿಟ್ಲರ್‌ನಂತೆ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಮಂಗಳೂರು ಚಲೋ ಕಾರ್ಯಕ್ರಮವನ್ನು ವಿಫಲಗೊಳಿಸಲು ಸರಕಾರ ಷಡ್ಯಂತ್ರ ನಡೆಸುತ್ತಿದೆ ಎಂದು ಆರೋಪಿಸಿದರು.
 
ಸರಕಾರದ ಅಡಳಿತ ವೈಫಲ್ಯ ಖಂಡಿಸಿ ಹಮ್ಮಿಕೊಂಡಿರುವ ಮಂಗಳೂರು ಚಲೋ ಬೈಕ್ ರ್ಯಾಲಿಗೆ ಸಾವಿರಾರು ಕಾರ್ಯಕರ್ತರು ಆಗಮಿಸಿದ್ದಾರೆ. ಆದರೆ, ಸರಕಾರ ತನ್ನ ಹಿಟ್ಲರ್ ಧೋರಣೆಯಿಂದ ಕಾರ್ಯಕರ್ತರನ್ನು ಬಂಧಿಸುತ್ತಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ