ಕೊರೊನಾಗೆ ಕಡಿವಾಣ ಬಿದ್ದಿದೆ ಎಂದ ಬಿಜೆಪಿ ಸಂಸದ

ಗುರುವಾರ, 14 ಮೇ 2020 (17:38 IST)
ಭಾರತದ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಯೋಚನೆಯಿಂದ ಹಾಗೂ ತೆಗೆದುಕೊಂಡ ದೃಢ ನಿರ್ಧಾರದಿಂದ ಭಾರತದಲ್ಲಿ ಕೊರೊನಾ ವ್ಯಾಪಕ ಪ್ರಮಾಣದಲ್ಲಿ ಹರಡುವುದಕ್ಕೆ ಕಡಿವಾಣ ಬಿದ್ದಿದೆ ಎಂದು ಬಿಜೆಪಿ ಸಂಸದ ಹೇಳಿದ್ದಾರೆ. 

ಕೋವಿಡ್-19 ಸೋಂಕಿನ ತಡೆ ಹಿನ್ನೆಲೆಯಲ್ಲಿ ದೇಶದ ಆರ್ಥಿಕ ಅಭಿವೃದ್ಧಿ ಹಾಗೂ ಸಾಮಾಜಿಕ ಸ್ವಾಸ್ಥ್ಯದ ದೃಷ್ಟಿಯಿಂದ 20 ಲಕ್ಷ ಕೋಟಿ ರೂಪಾಯಿಯ ಬೃಹತ್ ಮೊತ್ತದ ಪ್ಯಾಕೇಜ್ ಘೋಷಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಐತಿಹಾಸಿಕ ನಿರ್ಧಾರ ಕೈಗೊಂಡಿದೆ ಎಂದು ಸಂಸದ ಅನಂತಕುಮಾರ ಹೆಗಡೆ ಹೇಳಿದ್ದಾರೆ.

ಸ್ವದೇಶಿ ವಸ್ತು-ಸ್ವಾವಲಂಬಿ ಭಾರತ ಎಂಬ ಧ್ಯೇಯ ವಾಕ್ಯದಂತೆ ದೇಶೀಯ ವಸ್ತುಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಿರುವುದರಿಂದ ಭಾರತದ ಆರ್ಥಿಕ ಚಟುವಟಿಕೆಗಳಲ್ಲಿ ಸ್ವದೇಶಿ ಕಂಪನಿಗಳಿಗೆ ನೆರವಾಗಲಿದೆ. ಕೊರೊನಾ ಸೋಂಕಿನಿಂದ ಪ್ರಪಂಚದ ಕೆಲವು ಮುಂದುವರೆದ ರಾಷ್ಟ್ರಗಳು ತತ್ತರಿಸಿ ಹೋಗಿವೆ. ಆ ದೇಶಗಳಲ್ಲಿ ಸಾವಿನ ನಾಗಾಲೋಟ ಮುಂದುವರೆದಿದೆ.

ಭಾರತದ ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಯೋಚನೆಯಿಂದ ಹಾಗೂ ತೆಗೆದುಕೊಂಡ ದೃಢ ನಿರ್ಧಾರದಿಂದ ಭಾರತದಲ್ಲಿ ಕೊರೊನಾ ವ್ಯಾಪಕ ಪ್ರಮಾಣದಲ್ಲಿ ಹರಡುವುದಕ್ಕೆ ಕಡಿವಾಣ ಬಿದ್ದಿದೆ ಎಂದಿದ್ದಾರೆ.  

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ