ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ನಾಳೆ ಮೋದಿ ಸಮಾವೇಶಕ್ಕೆ ಹೋಗಲ್ಲ ಎಂದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್

Sampriya

ಶನಿವಾರ, 13 ಏಪ್ರಿಲ್ 2024 (15:35 IST)
Photo Courtesy X
ಮೈಸೂರು:  ಬಿಜೆಪಿ ಸಂಸದ ವಿ.ಶ್ರೀನಿವಾಸ ಪ್ರಸಾದ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಭೇಟಿಯಾಗಿ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಯಾಗುತ್ತಿದೆ.

ಈ ಭೇಟಿ ಹಿಂದೆ ಕಾಂಗ್ರೆಸ್ ಪಕ್ಷವು ಬಿಜೆಪಿ ದಲಿತ ನಾಯಕನ ಬೆಂಬಲ ಪಡೆಯುವ ಪ್ರಯತ್ನ ಎಂದು ಹೇಳುತ್ತಿದ್ದು, ಬಿಜೆಪಿಗೆ ತಳಮಳ ಶುರುವಾಗಿದೆ.

ಸಿಎಂ ಸಿದ್ದರಾಮಯ್ಯ ಭೇಟಿ ನಂತರ ಮಾತನಾಡಿದ ಶ್ರೀನಿವಾಸ ಪ್ರಸಾದ್ ಅವರು,  ನಾಳೆ ಪ್ರಧಾನಿ ಮೋದಿ ಅವರು ಮೈಸೂರಿಗೆ ಬರಲಿದ್ದಾರೆ. ಇದುವರೆಗೂ ನನಗೆ ಸಮಾವೇಶದ ಆಹ್ವಾನ ಬಂದಿಲ್ಲ, ಬರುವುದು ಇಲ್ಲ, ಕರೆದಿಲ್ಲ, ಕರೆಯುವುದೂ ಇಲ್ಲ. ನಾನು ಹೋಗುವುದೂ ಇಲ್ಲ ಎಂದು ಹೇಳಿದರು.

ಇನ್ನೂ ಸಿಎಂ ಸಿದ್ದರಾಮಯ್ಯ ಭೇಟಿ ಬಗ್ಗೆ ಪ್ರತಿಕ್ರಿತಿಕ್ರಿಯಿಸಿದ ಅವರು, ಈ ವೇಳೆ ರಾಜಕೀಯ ಚರ್ಚೆ ಬಗ್ಗೆ ಮಾತುಕತೆ ನಡೆದಿಲ್ಲ. ಅವರ ಭೇಟಿ ನನಗೆ ಸಹಜವಾಗಿಯೇ ಖುಷಿ ಕೊಟ್ಟಿದ್ದೆ. ಅವರು ನನ್ನ ಬೆಂಬಲ ಕೇಳಿದ್ದಾರೆ. ನಾನು ರಾಜಕೀಯವಾಗಿ ನಿವೃತ್ತಿಯಾಗಿದ್ದೇನೆ ಎಂದು ಹೇಳಿದ್ದೇನೆ. ಇನ್ನೂ ಕಾಂಗ್ರೆಸ್‌ಗೆ ಚಾಮರಾಜನಗರದಲ್ಲಿ ಉತ್ತಮ ವಾತಾವರಣವಿದೆ ಎಂದರು.

ಇನ್ನೂ ಚಾಮರಾಜನಗರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರು ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲ ನಮಗಿದೆ.ಅದಲ್ಲದೆ ಅವರ ಬೆಂಬಲಿಗರು ಈಗಾಗಲೇ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದು, ಅವರ ಆಶೀರ್ವಾದ ಪಡೆದಿದ್ದೇನೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ