ಕಟೀಲ್, ಹೆಗ್ಡೆ ಅವರನ್ನ ಸಮರ್ಥಿಸಿಕೊಂಡ ಬಿಜೆಪಿ.. ಕೂಡಲೇ ಕ್ಷಮೆ ಕೇಳಬೇಕು: ಉಗ್ರಪ್ಪ

ಶನಿವಾರ, 7 ಜನವರಿ 2017 (07:26 IST)
ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಇಡುವ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ವೈದ್ಯರ ಮೇಲೆ ಹಲ್ಲೆಗೈದ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಮರ್ಥಿಸಿಕೊಳ್ಳುವ ಮೂಲಕ ಬಿಜೆಪಿ ನಾಯಕರು ಗೂಂಡಾ ಪ್ರವೃತ್ತಿ ತೋರಿಸಿದ್ದಾರೆ. ಈ ಕೂಡಲೇ ಅವರು ಕ್ಷಮೆಯಾಚಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ ಒತ್ತಾಯಿಸಿದ್ದಾರೆ.
 
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಣಾಜೆಯಲ್ಲಿ ನಡೆದ ಕಾರ್ತಿಕ್‌ರಾಜ್ ಕೊಲೆ ಪ್ರಕರಣ ಸಂಬಂಧ ಸಂಸದ ನಳಿನ್ ಕುಮಾರ್ ಕಟೀಲ್ ದಕ್ಷಿಣ ಕನ್ನಡ ಜಿಲ್ಲೆಗೆ ಬೆಂಕಿ ಹಚ್ಚುವುದು ನಮಗೂ ಗೊತ್ತು ಎಂಬ ಆಕ್ಷೇಪಾರ್ಹ ಹೇಳಿಕೆ ನೀಡುವ ಮೂಲಕ ಜನರನ್ನು ಪ್ರಚೋದಿಸುವ ಕೆಲಸ ಮಾಡಿದ್ದಾರೆ. ಆದರೆ, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಸಂಸದ ಕಟೀಲ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಸರಿಯಲ್ಲ ಎಂದು ಕಿಡಿಕಾರಿದರು. 
 
ನಳಿನ್ ಕುಮಾರ್ ಕಟೀಲ್‌ರನ್ನು ಸಮರ್ಥಿಸಿಕೊಳ್ಳುವುದು ಎಷ್ಟು ಸರಿ? ಬಿಜೆಪಿ ನಾಯಕರು ಗೂಂಡಾ ಪ್ರವೃತ್ತಿ ಅನುಸರಿಸುತ್ತಿದ್ದಾರೆ. ರಾಜಕೀಯ ಲಾಭ ಪಡೆಯಲು ಬಿಜೆಪಿ ನಾಯಕರು ಗೂಂಡಾ ಪ್ರವೃತ್ತಿ ಅನುಸರಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  
 
ಇನ್ನೊಂದೆಜೆ ವೈದ್ಯರ ಮೇಲೆ ಸಂಸದ ಅನಂತ್ ಕುಮಾರ್ ಹೆಗಡೆ ಹಲ್ಲೆಗೈದಿದ್ದಾರೆ. ಇದು ಕೂಡಾ ಬಿಜೆಪಿ ಗೂಂಡಾ ಪ್ರವೃತ್ತಿಗೆ ಹಿಡಿಗ ಕೈಗನ್ನಡಿಯಾಗಿದೆ. ಆದರೂ ಸಹ ಹೆಗಡೆ ನಡೆಸಿದ ದೌರ್ಜನ್ಯದ ಕುರಿತು ಬಿಜೆಪಿ ಮುಖಂಡರು ಮಾತನಾಡುತ್ತಿಲ್ಲ. ಬದಲಿಗೆ ಇಂತಹ ನಾಯಕರನ್ನು ಕೆ.ಎಸ್.ಈಶ್ವರಪ್ಪ ಸಮರ್ಥಿಸಿಕೊಂಡಿದ್ದಾರೆ. ಈ ಕೂಡಲೇ ಬಿಜೆಪಿ ಮುಖಂಡರು ಕ್ಷಮೆ ಕೇಳಬೇಕು ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್.ಉಗ್ರಪ ಆಗ್ರಹಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ