ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪ್ರವಾಸ

ಸೋಮವಾರ, 20 ಫೆಬ್ರವರಿ 2023 (08:15 IST)
ಉಡುಪಿ : ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಿಜೆಪಿ ಹೈಕಮಾಂಡ್ ಸವಾಲಾಗಿ ಸ್ವೀಕರಿಸಿದ್ದು, ಪ್ರಧಾನಿ ಗೃಹ ಸಚಿವರು ಪಕ್ಷದ ರಾಷ್ಟ್ರೀಯ ನಾಯಕರು ಸರತಿ ಸಾಲಿನಲ್ಲಿ ರಾಜ್ಯಕ್ಕೆ ಭೇಟಿ ಕೊಡುತ್ತಿದ್ದಾರೆ.
 
ಬಿಜೆಪಿಯ ಭದ್ರಕೋಟೆ ಉಡುಪಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಪ್ರವಾಸ ಹೊರಟಿದ್ದಾರೆ. 1,111 ಬೂತ್ ಗಳಿಗೆ ನಡ್ಡಾ ಕ್ಲಾಸ್ ಕೊಡಲಿದ್ದಾರೆ.

ಕರ್ನಾಟಕ ವಿಧಾನಸಭಾ ಚುನಾವಣೆ 2023 ರಂಗು ಪಡೆಯುತ್ತಿದೆ. ಕಾಂಗ್ರೆಸ್ಸಿಗೆ ಅಳಿವು ಉಳಿವಿನ ಪ್ರಶ್ನೆ ಆದರೆ, ಬಿಜೆಪಿಗೆ ಈ ಚುನಾವಣೆ ಪ್ರತಿಷ್ಠೆ. ರಾಜ್ಯ ನಾಯಕರು ಟೊಂಕ ಕಟ್ಟಿಕೊಂಡು ಚುನಾವಣಾ ತಯಾರಿ ನಡೆಸುತ್ತಿದ್ದು,

ವಾರಕ್ಕೊಬ್ಬರಂತೆ ಕೇಂದ್ರದ ಬಿಜೆಪಿ ನಾಯಕರು ಕರ್ನಾಟಕಕ್ಕೆ ಪ್ರವಾಸ ಬರುತ್ತಿದ್ದಾರೆ. ಇಂದು ಉಡುಪಿಯಲ್ಲಿ ನಡ್ಡಾ ಮೂರು ಪ್ರಮುಖ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ