ಬಿಎಸ್‌ವೈ ತಿಪ್ಪರಲಾಗಾ ಹಾಕಿದ್ರೂ ಬಿಜೆಪಿ ಅಧಿಕಾರಕ್ಕೆ ಬರಲ್ಲ: ಸಿಎಂ ಭವಿಷ್ಯ

ಬುಧವಾರ, 20 ಸೆಪ್ಟಂಬರ್ 2017 (13:37 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಪ್ಪರಲಾಗ ಹಾಕಿದರೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲ್ಲ. ಅವರು 150 ಸೀಟು ಎನ್ನುವ ಚೀಟಿ ಇಟ್ಟುಕೊಂಡು ಓಡಾಡುತ್ತಿರಲಿ ಎಂದು ವ್ಯಂಗ್ಯವಾಡಿದರು.
 
ತಮ್ಮ ಕ್ಷೇತ್ರದಲ್ಲಿ ನಂಬಿಕೆಯಿಲ್ಲದವರು ಬೇರೆ ಕ್ಷೇತ್ರ ಹುಡುಕಿಕೊಂಡು ಹೋಗುತ್ತಾರೆ. ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸದಲ್ಲಿ ಜನತೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಕೆ ನೀಡಿದರು.
 
ಕೇಂದ್ರ ಸರಕಾರವೇ ರಾಜ್ಯದ ಸಚಿವರ, ಅಧಿಕಾರಿಗಳ ಫೋನ್ ಕದ್ದಾಲಿಕೆ ಮಾಡುತ್ತಿದೆ. ಫೋನ್ ಕದ್ದಾಲಿಸುವುದು ಬಿಜೆಪಿಗೆ ಸೂಕ್ತವಾಗಿದೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 
 
ಯಡಿಯೂರಪ್ಪ ವಿರುದ್ಧ ಸುಪ್ರೀಂಕೋರ್ಟ್, ಹೈಕೋರ್ಟ್‌ಗಳಲ್ಲಿ ಕೇಸ್‌ಗಳಿವೆ. ಅಂತಹ ವ್ಯಕ್ತಿ ನಮ್ಮ ವಿರುದ್ಧ ಚಾರ್ಜ್‌ಶೀಟ್ ಹಾಕ್ತಾರಂತೆ. ಅವರು ಯಾವ ಚಾರ್ಜ್‌ಶೀಟ್ ಹಾಕ್ತಾರಂತೆ ನೋಡಲು ನಾನು ಕಾಯುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ