ಬಿಜೆಪಿ ಪಕ್ಷಕ್ಕೆ ಸಾಮಾಜಿಕ ನ್ಯಾಯ, ಸಮಾನತೆ, ಸಂವಿಧಾನದಲ್ಲಿ ನಂಬಿಕೆ ಇಲ್ಲ..!

ಭಾನುವಾರ, 20 ನವೆಂಬರ್ 2022 (20:05 IST)
ಬಿಜೆಪಿ ಪಕ್ಷಕ್ಕೆ ಸಾಮಾಜಿಕ ನ್ಯಾಯ, ಸಮಾನತೆ, ಮೀಸಲಾತಿ, ಸಂವಿಧಾನದಲ್ಲಿ ನಂಬಿಕೆ ಇಲ್ಲ. ಹಾಗಿದ್ದಲ್ಲಿಯೂ ಇಂತಹ ಪಕ್ಷ, ನೊಂದ ಸಮುದಾಯಗಳ ಸಮಾವೇಶ ಮಾಡುತ್ತೇವೆ ಎಂದು ಮೊಸಳೆ ಕಣ್ಣೀರು ಹಾಕುತ್ತಿದೆ ಎಂದು ಬಿಜೆಪಿ ವಿರುದ್ಧ ಮಾಜಿ ಸಚಿವ ಎಚ್ ಸಿ ಮಹದೇವಪ್ಪ ಕಿಡಿಕಾರಿದ್ರು.ಸಂವಿಧಾನದ ಅಶಯ ಜಾರಿ ಮಾಡುವುದಕ್ಕೆ ಎಳ್ಳಷ್ಟು ಬಿಜೆಪಿಗೆ ಇಷ್ಟವಿಲ್ಲ. ಅದನ್ನೆಲ್ಲ ಜಾರಿ ಮಾಡುವುದು ಕಾಂಗ್ರೆಸ್ ಮಾತ್ರ ಎಂದು ಬಿಜೆಪಿ ವಿರುದ್ಧ ಗುಡುಗಿದ್ರು. ಬಳಿಕ ಸಿದ್ದರಾಮಯ್ಯ ಎಲ್ಲಿ ಸ್ಪರ್ಧೆ ಮಾಡಬೇಕು ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಸಿದ್ದರಾಮಯ್ಯ ನಿಲ್ಲಬೇಕಾ ಬೇಡವಾ ಎಂದು ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಅಲ್ಲದೇ ಪಂಚರತ್ನ ರಥಯಾತ್ರೆಯಲ್ಲಿ ಕುಮಾರಸ್ವಾಮಿ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಬಿಜೆಪಿ, ಜೆಡಿಎಸ್ ಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಅಂತಿದೆ. ಹೀಗಾಗಿಯೇ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಅವರನ್ನು ಟ್ರ್ಯಾಪ್ ಮಾಡಿದರೆ ಪಕ್ಷ ಸೋಲುತ್ತದೆ ಅಂತ ಅಂದುಕೊಂಡಿದ್ದಾರೆ. ಆದರೆ 2023 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ. ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ. ರಾಜ್ಯದಲ್ಲಿ 51 ಕ್ಷೇತ್ರಗಳು ಮೀಸಲು ಕ್ಷೇತ್ರ ಆಗಿವೆ. ಈ 51 ಕ್ಷೇತ್ರ ಬಿಟ್ಟು ಸಿದ್ದರಾಮಯ್ಯ ಎಲ್ಲೇ ನಿಂತರು ಗೆಲ್ಲುತ್ತಾರೆ. ಯಾಕೆಂದರೆ ರಾಜ್ಯದ ಜನಕ್ಕೆ ಸಿದ್ದರಾಮಯ್ಯ ಅಧಿಕಾರಕ್ಕೆ ಬರಬೇಕು ಎನ್ನುವುದಿದೆ. ಹೀಗಾಗಿ ಎಲ್ಲೇ ನಿಂತರು ಸಿದ್ದರಾಮಯ್ಯ ಸೇಫ್ ಎಂದು ಅಭಿಪ್ರಾಯಪಟ್ಟರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ