ನನ್ನ ಸ್ಥಾನದ ಬಗ್ಗೆ BJP ಪಕ್ಷಕ್ಕೆ ಗೊತ್ತಿದೆ: ಅಣ್ಣಾಮಲೈ

Sampriya

ಬುಧವಾರ, 9 ಏಪ್ರಿಲ್ 2025 (17:52 IST)
ಉಡುಪಿ: ನಾನೊಬ್ಬ ಪಕ್ಷದ ಕಾರ್ಯಕರ್ತನಾಗಿದ್ದು, ಪಕ್ಷ ನನಗೆ ಏನೇ ಜವಾಬ್ದಾರಿ ನೀಡಿದರು, ಅದನ್ನು ನಿಭಾಯಿಸಿದ್ದೇನೆ. ಇನ್ನೊಂದು ಜವಾಬ್ದಾರಿ ಕೊಟ್ಟರು ಕೆಲಸ ಮಾಡುತ್ತೇನೆ' ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಹೇಳಿದರು.

ಸುದ್ದಿಗಾರರೊಂದಿಗೆ ಬುಧವಾರ ಇಲ್ಲಿ ಮಾತನಾಡಿದ ಅವರು, ತಮಿಳುನಾಡಿನ ಬಿಜೆಪಿ ಅಧ್ಯಕ್ಷ ರೇಸ್‌ನಲ್ಲಿ ನಾನಿಲ್ಲ ಎನ್ನುವ ಮೂಲಕ ಅಣ್ಣಾಮಲೈ ಕುತೂಹಲ ಮೂಡಿಸಿದ್ದರು.

ಇದೀಗ ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತಮಿಳುನಾಡಿನ ವಿರೋಧ ಪಕ್ಷದ ನಾಯಕ ಪಳನಿ ಸ್ವಾಮಿ ಅವರನ್ನು ಭೇಟಿಯಾಗಿದ್ದಾರೆ. ಮೈತ್ರಿಯ ಬಗ್ಗೆಯೂ ಮಾತನಾಡಿದ್ದಾರೆ. ಡಿಎಂಕೆಯನ್ನು ಅಧಿಕಾರದಿಂದ ಕೆಳಗಿಳಿಸುವುದು ನಮ್ಮೆಲ್ಲರ ಉದ್ದೇಶ ಎಂದರು.

ರಾಜಕೀಯದಲ್ಲಿ ಅಧಿಕಾರಕ್ಕಿಂತ ತಾಳ್ಮೆ ಮುಖ್ಯ. ತಾಳ್ಮೆಯಿಂದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. ಒಂದಲ್ಲ ಒಂದು ದಿನ ಬಿಜೆಪಿ ತಮಿಳುನಾಡಿನಲ್ಲಿ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು.

ಎಐಎಡಿಎಂಕೆ ಕುರಿತ ನನ್ನ ನಿಲುವು ಎಲ್ಲರಿಗೂ ಗೊತ್ತಿದೆ. ಎಐಎಡಿಎಂಕೆ ಬಿಜೆಪಿ ಜೊತೆ ಮೈತ್ರಿ ಬಯಸುತ್ತಿದೆ. ನಾನು ಎಲ್ಲಿ ಇರಬೇಕು, ಯಾವ ಸ್ಥಾನದಲ್ಲಿರಬೇಕು ಎಂಬುದು ಪಕ್ಷಕ್ಕೆ ಗೊತ್ತಿದೆ ಎಂದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ