ಬಿಜೆಪಿ ಬಿಕ್ಕಟ್ಟು: ಮುರಳೀಧರ್ ರಾವ್ ಇಂದು ಬೆಂಗಳೂರಿಗೆ

ಶನಿವಾರ, 29 ಏಪ್ರಿಲ್ 2017 (16:22 IST)
ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿ ಇಲ್ಲವೆಂಬುದು ಇತ್ತೀಚೆಗೆ ಅರಮನೆ ಮೈದಾನದಲ್ಲಿ ನಡೆದ ಅತೃಪ್ತರ ಸಭೆ ಬಳಿಕ ಜಗತ್ಹಾಹೀರಾಗಿದೆ. ಈಶ್ವರಪ್ಪ ಸೇರಿದಂತೆ ಹಲವು ನಾಯಕರು ಯಡಿಯೂರಪ್ಪ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು.

ಇದೀಗ, ರಾಜ್ಯದ ಬೆಳವಣಿಗೆ ಕಂಡೂ ಕಾಣದಂತೆ ಸುಮ್ಮನಿದ್ದ ಹೈಕಮಾಂಡ್ ಉಸ್ತುವಾರಿಯನ್ನ ರಾಜ್ಯಕ್ಕೆ ಕಳುಹಿಸುತ್ತಿದೆ. ಸಂಜೆ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಬೆಂಗಳೂರಿಗೆ ಆಗಮಿಸಿದ್ದಾರೆ. ಈಶ್ವರಪ್ಪ ಮತ್ತು ಯಡಿಯೂರಪ್ಪ ಅವರನ್ನ ಮುಖಾಮುಖಿ ಕೂರಿಸಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಆದರೆ, ಮುರಳೀಧರ್ ಭೇಟಿ ನಿಗದಿಯಾಗಿಲ್ಲ ಎಂದು ಈಶ್ವರಪ್ಪನವರು ಹೇಳಿರುವುದಾಗಿ ತಿಳಿದುಬಂದಿದೆ. ಅಮಿತ್ ಶಾ ಜಮ್ಮು ಮತ್ತು ಕಾಶ್ಮೀರದ ಪ್ರವಾಸದಲ್ಲಿದ್ದು, ರಾಜ್ಯಕ್ಕೆ ಭೇಟಿ ನೀಡುತ್ತಿರುವ ಮುರಳೀಧರ್ ರಾವ್ ಎರಡೂ ಬಣಗಳ ಅಭಿಪ್ರಾಯ ಪಡೆದು ಹೈಕಮಾಂಡ್`ಗೆ ವರದಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುವ ಆಲೋಚನೆಯಲ್ಲಿರುವ ಬಿಜೆಪಿಗೆ ಪ್ರಮುಖ ನಾಯಕರ ನಡುವೆ ಬಿಕ್ಕಟ್ಟು ಏರ್ಪಟ್ಟಿರುವುದು ಹೈಕಮಾಂಡ್`ಗೆ ನುಂಗಲಾರದ ತುತ್ತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ