ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ; ಶಾಸಕರ ಆಪ್ತ ಕಾರ್ಪೋರೇಟರ್ ಗಳಿಗೆ ಅಧಿಕೃತ ಮಾನ್ಯತೆ

ಶುಕ್ರವಾರ, 28 ಆಗಸ್ಟ್ 2020 (09:45 IST)
ಬೆಂಗಳೂರು : ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುತ್ತಿದ್ದು,  ಶಾಸಕರ ಆಪ್ತ ಕಾರ್ಪೋರೇಟರ್ ಗಳಿಗೆ ಅಧಿಕೃತ ಮಾನ್ಯತೆ ನೀಡಲಾಗುತ್ತಿದೆ ಎನ್ನಲಾಗಿದೆ.

ಶಾಸಕರ ಜೊತೆಗೆ ಬಿಜೆಪಿಗೆ ಬಂದಿರುವ ಕಾರ್ಪೋರೇಟರ್ ಗಳು ಬಿಜೆಪಿ ಸೇರ್ಪಡೆಯಾಗಲಿದ್ದು, ಬಿಜೆಪಿ ಸದಸ್ಯತ್ವ ನೀಡಿ ಪಕ್ಷಕ್ಕೆ ಬರಮಾಡಿಕೊಳ್ಳಲು ತೀರ್ಮಾನ ಮಾಡಲಾಗಿದೆ. ನಿನ್ನೆ ನಡೆದ ಬಿಜೆಪಿ ಶಾಸಕರು ಮತ್ತು ಸಚಿವರ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.

ಕೆಲ ಬಿಬಿಎಂಪಿ ಸದಸ್ಯರಿಗೆ ಸದ್ಯದಲ್ಲೆ ಅಧಿಕೃತ ಮಾನ್ಯತೆ ನೀಡಲಾಗುವುದು. 20ಕ್ಕೂ ಹೆಚ್ಚು ಬಿಬಿಎಂಪಿ ಸದಸ್ಯರು ಬಿಜೆಪಿ ಸೇರ್ಪಡೆಗೆ ಸಿದ್ಧತೆ ಮಾಡಿಕೊಂಡಿದ್ದು,  ಪಕ್ಷದ ಕಚೇರಿಯಲ್ಲಿ ಈ ಬಗ್ಗೆ ಅಧಿಕೃತ ಸೇರ್ಪಡೆ ಕಾರ್ಯಕ್ರಮ ನಡೆಸಲಾಗುವುದು ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ