ಮಠಯಾತ್ರೆ ಶುರು ಮಾಡಿದ ಬಿಜೆಪಿ ಅಧ್ಯಕ್ಷ ನಡ್ಡಾ
ಮೋದಿ, ಅಮಿತ್ ಶಾ ಬಂದು ಹೋದ ಬೆನ್ನಲ್ಲೇ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜ್ಯ ಪ್ರವಾಸ ಕೈಗೊಂಡಿದ್ದಾರೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆಗೆ ಮುಂದಾಗಿರುವ ಜೆಪಿ ನಡ್ಡಾ ವಿಶೇಷವಾಗಿ ಪ್ರಮುಖವಾಗಿ ನಾಲ್ಕು ಸಮುದಾಯಗಳನ್ನು ಟಾರ್ಗೆಟ್ ಮಾಡಿಕೊಂಡು ಮಠಯಾತ್ರೆ ನಡೆಸುತ್ತಿದ್ದಾರೆ.
ಪ್ರವಾಸದ ಮೊದಲ ದಿನವಾದ ಗುರುವಾರ ತುಮಕೂರಿನ ಸಿದ್ದಗಂಗಾ ಮಠ, ಚಿತ್ರದುರ್ಗದ ಮಾದಾರ ಚನ್ನಯ್ಯ ಮಠ, ಸಿರಿಗೆರೆಯ ತರಳಬಾಳು ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದಿದ್ದಾರೆ. ಭೇಟಿ ಮಧ್ಯೆ ಪಕ್ಷದ ಶಕ್ತಿ ಕೇಂದ್ರಗಳ ಪ್ರಮುಖರ ಜೊತೆ, ಎಸ್ಸಿ, ಎಸ್ಟಿ, ಓಬಿಸಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ.