ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬರೋದು ಖಚಿತ ಎಂದ ಬಿಜೆಪಿ ರಾಜ್ಯಾಧ್ಯಕ್ಷ

ಮಂಗಳವಾರ, 12 ನವೆಂಬರ್ 2019 (13:15 IST)
ಚುನಾವಣೆಯಲ್ಲಿ ಬಿಜೆಪಿ ಗೆಲುವು ದಾಖಲಿಸಿ ಅಧಿಕಾರಕ್ಕೆ ಬರೋದು ಖಚಿತ ಅಂತ ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ 60  ವಾರ್ಡ್ ಗಳಿಗೆ ಚುನಾವಣೆ ನಡೆಯುತ್ತಿದೆ. ಮಂಗಳೂರಿನ ಲೇಡಿ ಹಿಲ್ ಸಂತ ಅಲೋಶಿಯೂಸ್ ಶಾಲೆಯ ಮತಗಟ್ಟೆಯಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಮತದಾನ ಮಾಡಿದ್ರು.

ರಾಜ್ಯದ ವಿವಿಧೆಡೆ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಜಯಭೇರಿ  ಗಳಿಸಲಿದೆ. ಜನ ಬಿಜೆಪಿ ಪರ ಒಲವು ಹೊಂದಿದ್ದಾರೆ. ಪಾಲಿಕೆಯಲ್ಲಿ  ಈ ಹಿಂದೆ ಆಡಳಿತ ಮಾಡಿದ ಕಾಂಗ್ರೆಸ್ ನಗರದ ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷಿಸಿದೆ. ಭ್ರಷ್ಟಾಚಾರದ ಆಡಳಿತ ದಿಂದ ಜನ ರೋಸಿ ಹೋಗಿದ್ದಾರೆ ಎಂದು ಆರೋಪಿಸಿದ್ರು. 


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ