ಟಿಪ್ಪು ಜಯಂತಿ ವಿರೋಧಿಸಿ ದ.ಕ. ಜಿಲ್ಲೆ, ಕೊಡಗಿನಲ್ಲಿ ಬಂದ್ ವಾತಾವರಣ

ಶನಿವಾರ, 10 ನವೆಂಬರ್ 2018 (09:17 IST)
ಮಂಗಳೂರು: ಹಿಂದೂ ಸಂಘಟನೆಗಳು ಮತ್ತು ಬಿಜೆಪಿ ವಿರೋಧದ ನಡುವೆಯೇ ರಾಜ್ಯ ಸರ್ಕಾರ ಇಂದು ಟಿಪ್ಪು ಜಯಂತಿ ಕಾರ್ಯಕ್ರಮ ಆಯೋಜಿಸುತ್ತಿದ್ದು, ಕೊಡಗು, ದ.ಕ. ಜಿಲ್ಲೆಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.

ವಿವಾದಾತ್ಮಕ ಟಿಪ್ಪು ಜಯಂತಿ ಆಚರಣೆಗೆ ಕೊಡಗಿನಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಹಾಗಿದ್ದರೂ ಪ್ರತಿಭಟನಾಕಾರರು ಜಯಂತಿ ಆಚರಣೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಕೆಲವು ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ.

ಇನ್ನು, ಕೊಡಗು ಸಂಸದ ಪ್ರತಾಪ್ ಸಿಂಹ, ಪ್ರತಿಭಟನಾ ಸ್ಥಳಕ್ಕೆ ಆಗಮಿಸುವ ನಿರೀಕ್ಷೆಯಿದ್ದು, ವಿರೋಧಿ ಹೋರಾಟದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಮುನ್ನಚ್ಚೆರಿಕೆ ಕ್ರಮವಾಗಿ ಮಡಿಕೇರಿ, ದ.ಕ. ಜಿಲ್ಲೆ, ಚಿಕ್ಕಮಗಳೂರು, ಹುಬ್ಬಳ್ಳಿ ಧಾರವಾಡ, ಕುಲಬರಗಿ, ಕೋಲಾರ ಸೇರಿದಂತೆ ಹಲವೆಡೆ ನಿಷೇಧಾಜ್ಞೆ ಹೇರಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ