ಬೆಂಗಳೂರು: ವಿಧಾನ ಪರಿಷತ್ ನಲ್ಲಿ ಈಶ್ವರಪ್ಪ-ಸಿಎಂ ಸಿದ್ದರಾಮಯ್ಯ ರೈತರ ಸಾಲಮನ್ನಾ ವಿಚಾರವಾಗಿ ಪರಸ್ಪರ ಕೆಸರೆರಚಾಟ ಮಾಡಿಕೊಂಡರೆ, ವಿಧಾನ ಸಭೆಯಲ್ಲಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿ ಕೋಲಾಹಲ ಸೃಷ್ಟಿಸಿತು.
ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅನುಮಾನಸ್ಪದ ಸಾವು ಪ್ರಕರಣದಲ್ಲಿ ರಾಜ್ಯ ಸರ್ಕಾರ ಏನನ್ನೋ ಮುಚ್ಚಿಡಲು ಯತ್ನಿಸುತ್ತಿದೆ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಶೆಟ್ಟರ್ ಪಟ್ಟು ಹಿಡಿದರು.
ಅಲ್ಲದೆ, ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಪ್ರತಿಭಟಿಸಲು ಮುಂದಾದರು. ಆದರೆ ಸಭಾಧ್ಯಕ್ಷ ಕೋಳಿವಾಡ ಮಧ್ಯಪ್ರವೇಶಿಸಿ, ಇದು ಉತ್ತರ ಪ್ರದೇಶ ಸರ್ಕಾರದ ಕೆಲಸ. ವೃಥಾ ತಿವಾರಿ ಪ್ರಕರಣವನ್ನು ಎಳೆದು ತಂದು ಸದನದ ಸಮಯ ಹಾಳು ಮಾಡಬೇಡಿ ಎಂದು ತಾಕೀತು ಮಾಡಿದರು.