ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಬುಧವಾರ, 24 ಆಗಸ್ಟ್ 2016 (12:05 IST)
ಬೆಂಗಳೂರಿನಲ್ಲಿ ಭಾರತೀಯ ಸೇನೆ ವಿರುದ್ಧ ಆಕ್ಷೇಪಾರ್ಹ ಘೋಷಣೆ ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಂತ ಬಿಜೆಪಿ ಪ್ರತಿಭಟನೆ ಕೈಗೊಂಡಿದೆ.
ಅಮ್ನೆಸ್ಟಿ ಇಂಡಿಯಾ ಸಂಸ್ಥೆಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಪ್ರತಿಭಟೆನೆಗೆ ಬಿಜೆಪಿ ಶಾಸಕರು ಹಾಗೂ ಪಾಲಿಕೆ ಸದಸ್ಯರು ಸಾಥ್ ನೀಡಿದ್ದಾರೆ.
ವಸಂತನಗರದ ಮಿಲ್ಲರ್ಸ್ ರಸ್ತೆಯಲ್ಲಿರುವ ಯುನೈಟೆಡ್ ಥಿಯಾಲಾಜಿಕಲ್ ಕಾಲೇಜ್‌ನಲ್ಲಿ ಅಮ್ನೆಸ್ಟಿ ಇಂಟರ್‌ನ್ಯಾಷನಲ್ ಇಂಡಿಯಾ ಸಂಸ್ಥೆ 'ಬ್ರೋಕನ್ ಫ್ಯಾಮಿಲೀಸ್' ಹೆಸರಿನ ಕಾರ್ಯಾಗಾರ ಆಯೋಜಿಸಿತ್ತು. ಈ ವೇಳೆ ಭಾರತೀಯ ಸೇನೆಯ ವಿರುದ್ಧ ಘೋಷಣೆ ಕೂಗಿರುವುದು ಭಾರೀ ವಿವಾದಕ್ಕೆ ಕಾರಣವಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ