ಬಿಜೆಪಿ ರಕ್ಷಾ ಪಾದ ಯಾತ್ರೆಗೆ ಚಾಲನೆ
ಬೆಂಗಳೂರಿನ ಗವಿ ಗಂಗಾಧರೇಶ್ವರ ದೇವಾಲಯದ ಬಳಿಯಿಂದ ವಿಶೇಷ ವಾಹನಕ್ಕೆ ಹಸಿರು ನಿಶಾನೆ ತೋರಿದ ಬಿಜೆಪಿ ನಾಯಕ ಆರ್. ಅಶೋಕ್ ಪಾದ ಯಾತ್ರೆಗೆ ಈ ಮೂಲಕ ಚಾಲನೆ ನೀಡಿದ್ದಾರೆ.
ಪ್ರತಿ ನಿತ್ಯ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ನಾಯಕರು ಪಾದ ಯಾತ್ರೆ ಕೈಗೊಳ್ಳಲಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದ ವೈಫಲ್ಯಗಳ ಬಗ್ಗೆ ಜನರಿಗೆ ಹೇಳಲಿದ್ದಾರೆ. ಪಾದ ಯಾತ್ರೆ ಕಾರ್ಯಕ್ರಮದ ಅಂತಿಮ ದಿನಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ರನ್ನು ಕರೆಸಿ ಬೃಹತ್ ಕಾರ್ಯಕ್ರಮ ಆಯೋಜಿಸುವ ಯೋಜನೆ ಬಿಜೆಪಿ ನಾಯಕರಿಗಿದೆ.