ಬಿಜೆಪಿಯ ಜನ ಸ್ವರಾಜ್ ಯಾತ್ರೆ ಗುರುವಾರದಿಂದ ಶುರುವಾಗಲಿದೆ. ಇದಕ್ಕೂ ಮುನ್ನ ನಿಕಟ ಪೂರ್ವ ಮುಖ್ಯಮಂತ್ರಿ ಯಡಿಯೂರಪ್ಪ ಮಾಧ್ಯಮಗಳ ಜೊತೆ ಮಾತನಾಡಿದ್ದಾರೆ. ನಾಲ್ಕು ತಂಡಗಳಲ್ಲಿ,ನಾಲ್ಕು ದಿನ ಪ್ರವಾಸ ಮಾಡುತ್ತೇವೆಂದು ಯಡಿಯೂರಪ್ಪ ಹೇಳಿದ್ದಾರೆ.ಪ್ರವಾಸದ ವೇಳೆ,ಸ್ಥಳೀಯ ಸಮಸ್ಯೆಗಳನ್ನು ಆಲಿಸುವ ಜೊತೆಗೆ ವಿಧಾನ ಪರಿಷತ್ ಚುನಾವಣೆ ಸಿದ್ಧತೆ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದಿದ್ದಾರೆ. ಬಿಟ್ ಕಾಯಿನ್ ನಲ್ಲಿ ಭಾಗಿಯಾಗಿರುವವರ ಬಗ್ಗೆ ಮಾಹಿತಿ ನೀಡಿದಲ್ಲಿ,ತನಿಖೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ. ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ನಾಳೆ ಅಂತಿಮಗೊಳ್ಳುವ ಸಾಧ್ಯತೆಯಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ಯಾತ್ರೆ ನಡೆಯಲಿದೆ. ಆಯಾ ಭಾಗದ ಕೇಂದ್ರ ಸಚಿವರು, ಸಂಸದರು, ಶಾಸಕರು, ಮುಖಂಡರು ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.