ಬಿಜೆಪಿ, ಆರ್‌ಎಸ್‌ಎಸ್‌, ಬಜರಂಗದಳದವರೇ ಉಗ್ರಗಾಮಿಗಳು– ಸಿಎಂ

ಬುಧವಾರ, 10 ಜನವರಿ 2018 (13:04 IST)
ಬಿಜೆಪಿ, ಆರ್‌ಎಸ್‌ಎಸ್‌ ಹಾಗೂ ಬಜರಂಗದಳದವರೇ ಉಗ್ರಗಾಮಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.
 
ಚಾಮರಾಜನಗರ ನಾಗವಳ್ಳಿ ಹೆಲಿಪ್ಯಾಡ್‌ನಲ್ಲಿ ಮಾತನಾಡಿದ ಅವರು, ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಬಜರಂಗದಳದವರೇ ಉಗ್ರಗಾಮಿಗಳು ಎಂದು ವಿವಾದದ ಕಿಚ್ಚು ಹಚ್ಚಿದ್ದಾರೆ.

ಬಿಜೆಪಿಯವರಿಗೆ ನಮ್ಮ ಬಗ್ಗೆ ಮಾತನಾಡುವ ನೈತಿಕತೆಯಿಲ್ಲ. ಯಾರೇ ಉಗ್ರಗಾಮಿಗಳ ಕೆಲಸ ಮಾಡಿದರೆ ಅವರನ್ನು ಸರ್ಕಾರ ಸಹಿಸಲ್ಲ. ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
 
ಶಾಂತಿ ಕದಡುವ, ಹಿಂಸಾಚಾರ ಉಂಟುಮಾಡುವ ಪಿಎಫ್‌ಐ, ವಿಶ್ವ ಹಿಂದೂಪರಿಷತ್, ಭಜರಂಗದಳ ಸೇರಿದಂತೆ ಯಾವುದೇ ಸಂಘಟನೆಯವರಾದರೂ ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ