ಮೋದಿ ವಿದೇಶಕ್ಕೆ ತೆರಳಿ ಮಾತನಾಡಲು ಕಾಂಗ್ರೆಸ್ ಕಾರಣ: ಜಿ.ಪರಮೇಶ್ವರ್

ಸೋಮವಾರ, 14 ನವೆಂಬರ್ 2016 (14:21 IST)
ದೇಶದ ಅಭಿವೃದ್ಧಿಯಲ್ಲಿ ಬಿಜೆಪಿಯ ಕೊಡುಗೆ ಶೂನ್ಯ. ಭಾರತ ದೇಶವನ್ನು ಕಟ್ಟಿ ಬೆಳೆಸಿದ್ದು ಕಾಂಗ್ರೆಸ್. ಇಂದು ಪ್ರಧಾನಿ ನರೇಂದ್ರ ಮೊದಿ ವಿದೇಶಕ್ಕೆ ತೆರಳಿ ದೇಶದ ಅಭಿವೃದ್ಧಿ ಕುರಿತು ಮಾತನಾಡಲು ಕಾಂಗ್ರೆಸ್ ಕಾರಣ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ. 
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ದೇಶದ ಅಭಿವೃದ್ಧಿಗೆ ಶ್ರಮಿಸಿರುವುದು ಕಾಂಗ್ರೆಸ್. ಕಾಂಗ್ರೆಸ್ ದೇಶವನ್ನು ಅಭಿವೃದ್ಧಿಗೊಳಿಸಿದೆ. ಬಿಜೆಪಿಯವರು ಮತ್ತಷ್ಟು ಅಭಿವೃದ್ಧಿಗೊಳಿಸುತ್ತೇವೆ ಎಂದರೆ ಸ್ವಾಗತಿಸುವುದಾಗಿ ತಿಳಿಸಿದರು. 
 
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯ ಬಿಜೆಪಿಯವರು 150 ಸ್ಥಾನದಲ್ಲಿ ಜಯಗಳಿಸುತ್ತೇವೆ ಎನ್ನುತ್ತಿದ್ದಾರೆ. ಅಲ್ಲಿಯವರೆಗೂ ನಾವು ಕಡಲೆಪುರಿ ತಿನ್ನುತ್ತಿರುತ್ತೇವಾ. ಮುಂದೆಯೂ ಸಹ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ಪೂರ್ವ ಸಿದ್ಧತೆ ಇಲ್ಲದೆ ನೋಟುಗಳ ನಿಷೇಧ ಮಾಡಿರುವುದು ಸರಿಯಲ್ಲ. ಇದರಿಂದ ಬಡವರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ