ಜನರಲ್ಲಿ ಕೋಮುಭಾವನೆ ಕೆರಳಿಸಿ, ಬೆಂಕಿ ಹಚ್ಚುವುದೇ ಬಿಜೆಪಿಯ ಕೆಲಸ: ಶಿವಕುಮಾರ್ ವಾಗ್ದಾಳಿ
ಸತೀಶ್ ಸೈಲ್ ಅವರ ಬಂಧನದ ಅವಶ್ಯಕತೆ ಇರಲಿಲ್ಲ. ಈ ಪ್ರಕರಣದ ವಿಚಾರಣೆ 2010ರಿಂದಲೇ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರ ಮೇಲೆ ಮಾತ್ರ ಗುರಿಯಾಗಿಸಿ ಇಂತಹ ದಾಳಿಗಳು ನಡೆಯುತ್ತಿವೆ. ಆ ಮೂಲಕ ಕಾಂಗ್ರೆಸ್ ನಾಯಕರಿಗೆ ತೊಂದರೆ ನೀಡುವ ಕೆಲಸ ನಡೆಯುತ್ತಿದೆ ಎಂದು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರ ಬಂಧನದ ವಿಚಾರವಾಗಿ ಪ್ರತಿಕ್ರಿಯಿಸಿದರು.