ಕುಂದಾಪುರದಲ್ಲಿ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿಗೆ ಜಯ

ಶನಿವಾರ, 13 ಮೇ 2023 (11:33 IST)
ಉಡುಪಿ : ಕುಂದಾಪುರ ಕ್ಷೇತ್ರದಲ್ಲಿ ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ ಜಯ ಸಾಧಿಸಿದ್ದಾರೆ.

ಹಾಲಾಡಿ ಶ್ರೀನಿವಾಸ ಶೆಟ್ಟಿ ಈ ಬಾರಿ ತ್ಯಾಗ ಮಾಡಿದ್ದರು. ಕಾಂಗ್ರೆಸ್ನಿಂದ ಮೊಳಹಳ್ಳಿ ದಿನೇಶ್ ಹೆಗ್ಡೆ ಕಣದಲ್ಲಿದ್ದರು.

ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ವಾಜಪೇಯಿ ಎಂದೇ ಫೇಮಸ್. ಕಳೆದ ಐದು ಅವಧಿ ಅಂದರೆ 25 ವರ್ಷಗಳ ಕಾಲ ಹಾಲಾಡಿ ಶ್ರೀನಿವಾಸ ಶೆಟ್ಟಿ ಕುಂದಾಪುರದ ಶಾಸಕ.

ಈ ಬಾರಿ ಕೂಡ ಹಾಲಾಡಿ ಶ್ರೀನಿವಾಸ ಶೆಟ್ಟಿ ತನ್ನ ಕೊನೆಯ ಚುನಾವಣೆಯನ್ನು ಎದುರಿಸುತ್ತಾರೆ ಎಂಬ ಮಾತುಗಳಿದ್ದವು. ಆದರೆ ಹಾಲಾಡಿ ಶ್ರೀನಿವಾಸ ಶೆಟ್ಟಿ, ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದರು. 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ