ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ಪ್ರತಿಭಟನೆ
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ಹಿನ್ನೆಲೆ ಮೌರ್ಯ ಹೋಟೆಲ್ ಗಾಂಧಿ ಪ್ರತಿಮೆ ಬಳಿ ಪೊಲೀಸರ ಸರ್ಪಗಾವಲಿನ ವ್ಯವಸ್ಥೆ ಮಾಡಲಾಗಿದೆ.ಅಕ್ಕಿ ವಿಚಾರವಾಗಿ ರಾಜ್ಯ ಸರ್ಕಾರ ಕೊಟ್ಟ ಹೇಳಿಕೆ ವಿರೋಧಿಸಿ ಬಿಜೆಪಿಯಿಂದ ರಾಜ್ಯದ ಹಲವು ಕಡೆ ಪ್ರತಿಭಟನೆ ಮಾಡಲಾಗಿದೆ.ಇಂದು ನಡೆಯಬೇಕಿದ್ದ ಪ್ರತಿಭಟನೆ ಮಳೆಯಿಂದ ಸ್ವಲ್ಪ ವಿಳಂಬವಾಗಿದೆ.ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯ ಮೊದಲನೇ ಪ್ರತಿಭಟನೆಯಾಗಿದ್ದು,ಪ್ರತಿಭಟನ ಸ್ಥಳಕ್ಕೆ ಮಳೆಯಲ್ಲೇ ಛತ್ರಿ ಹಿಡಿದು ಮಾಜಿ ಸಚಿವ ಆರ್ ಅಶೋಕ್ ಆಗಮಿಸಿದ್ದು,ಎಂಎನ್‌ಸಿಗಳಾದ ಚಲವಾದಿ ನಾರಾಯಣಸ್ವಾಮಿ , ರವಿಕುಮಾರ್ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.ಇನ್ನೂ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.