ಪ್ರತಿಪಕ್ಷದ ನಾಯಕರನ್ನು ಜೈಲಿಗೆ ತಳ್ಳುವ ಮೂಲಕ ಕಾಯಂ ಆಗಿ ಅಧಿಕಾರದಲ್ಲಿರಲು ಬಿಜೆಪಿ ತಂತ್ರ-ಜೆಡಿಎಸ್ ಕಿಡಿ

ಗುರುವಾರ, 22 ಆಗಸ್ಟ್ 2019 (12:00 IST)
ಬೆಂಗಳೂರು : ಐಎನ್ ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿರುವುದಕ್ಕೆ ಜೆಡಿಎಸ್ ಕೇಂದ್ರ ಸರ್ಕಾರದ ಮೇಲೆ ಕಿಡಿಕಾರಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಜೆಡಿಎಸ್​ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಮೇಶ್​ ಬಾಬು, ಚಿದಂಬರಂ ವಿಷಯದಲ್ಲಿ ಕೇಂದ್ರ ಸರ್ಕಾರ ಸಿಬಿಐ ದುರಪಯೋಗ ಮಾಡಿಕೊಂಡಿದೆ. ಬಿಜೆಪಿ ನಮ್ಮ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಚಿಕೆಗೇಡಿನ ರಾಜಕಾರಣ ಮಾಡುತ್ತಿದ್ದು, ಪ್ರತಿಪಕ್ಷಗಳ ನಾಯಕರನ್ನು ಜೈಲಿಗೆ ತಳ್ಳುವ ಮೂಲಕ ಕಾಯಂ ಆಗಿ ಅಧಿಕಾರದಲ್ಲಿ ಉಳಿಯುವ ಕನಸು ಕಾಣುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಹಿರಿಯ ನಾಯಕರನ್ನು ಬಂಧಿಸುವ ಮೂಲಕ ಪ್ರತಿಪಕ್ಷಗಳ ಹಣಿಯುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ. ಬಿಜೆಪಿಯ ಈ ಪ್ರಯತ್ನಕ್ಕೆ ಪ್ರಜಾಪೃಭುತ್ವದ ಮೌಲ್ಯಗಳೇ ಮುಂದೆ ತಕ್ಕ ಉತ್ತರ ನೀಡಲಿದೆ ಎಂದು ಅವರು ಕಿಡಿಕಾರಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ