ರಾಜ್ಯದ 28 ಲೋಕಸಭಾ ಸ್ಥಾನದಲ್ಲೂ ಬಿಜೆಪಿ ಗೆಲುವು ಖಚಿತ : ಕಟೀಲ್

ಸೋಮವಾರ, 18 ಸೆಪ್ಟಂಬರ್ 2023 (09:25 IST)
ಕೋಲಾರ : ರಾಜ್ಯದಲ್ಲಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಎಲ್ಲ 28 ಸ್ಥಾನಗಳನ್ನು ಗೆಲ್ಲಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಆಚರಣೆ ಹಾಗೂ ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಖಂಡಿಸಿ ರೈತ ನಾಯಕ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ರಾಜ್ಯಾದ್ಯಂತ ಪ್ರವಾಸದ ಪ್ರಾರಂಭದ ಹಿನ್ನೆಲೆಯಲ್ಲಿ ಕೋಲಾರದ ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಮಹಾಪೂಜೆಯ ಬಳಿಕ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಯಡಿಯೂರಪ್ಪ ಅವರ ಸಂಕಲ್ಪದಂತೆ ಮೋದಿಜಿ ಅವರಿಗೆ ಬಲ ತುಂಬಲು ಕುರುಡುಮಲೆ ಗಣಪತಿಗೆ ಆರಾಧನೆ ಮಾಡಿ ಭ್ರಷ್ಟ ಸರ್ಕಾರದ ವಿರುದ್ಧ ಹೋರಾಟ ಆರಂಭ ಮಾಡುತ್ತಿದ್ದೇವೆ. ಒಂಬತ್ತೂವರೆ ವರ್ಷಗಳಲ್ಲಿ ಮೋದಿಜಿ ಅವರು ಭ್ರಷ್ಟಾಚಾರ ರಹಿತ ಆಡಳಿತವನ್ನು ನೀಡಿದ್ದಾರೆ.

ಸಾಮಾನ್ಯ ಜನರಿಗೆ ಬಲ ತುಂಬುವ ಹಲವಾರು ಯೋಜನೆಗಳನ್ನು ನರೇಂದ್ರ ಮೋದಿಯವರ ಸರ್ಕಾರ ನೀಡಿದೆ ಎಂದು ವಿಶ್ಲೇಷಿಸಿದರು. ಸ್ವನಿಧಿ ಯೋಜನೆ, ವಿಶ್ವಕರ್ಮ ಯೋಜನೆಗಳನ್ನು ಇವತ್ತು ಅನುಷ್ಠಾನ ಮಾಡಲಾಗುತ್ತಿದೆ ಎಂದು ವಿವರಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ