ಮಹಾರಾಷ್ಟ್ರ ಚುನಾವಣೆಗೆ ಖರ್ಚು ಮಾಡಲು ಕಾಂಗ್ರೆಸ್ ಗೆ ಹಣ ಬೇಕೆಂದು ರಾಜ್ಯದ ಜನರಿಗೆ ತೆರಿಗೆ ಬರೆ

Krishnaveni K

ಮಂಗಳವಾರ, 2 ಜುಲೈ 2024 (10:42 IST)
ಬೆಂಗಳೂರು: ಮಹಾರಾಷ್ಟ್ರದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಖರ್ಚು ಮಾಡಲು ಹಣ ಸಂಗ್ರಹಿಸಿ ಕೊಡಬೇಕೆಂದು ಕರ್ನಾಟಕದ ಜನರಿಗೆ ಆಸ್ತಿ ತೆರಿಗೆ ಹೆಚ್ಚು ಮಾಡಿ ಬರೆ ಹಾಕಲಾಗಿದೆ ಎಂದು ಕರ್ನಾಟಕ ಬಿಜೆಪಿ ಆರೋಪಿಸಿದೆ.

ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿರುವ ಕರ್ನಾಟಕ ಬಿಜೆಪಿ ಘಟಕ, ಮಹಾರಾಷ್ಟ್ರ ಕಾಂಗ್ರೆಸ್ ನ ಎಲೆಕ್ಷನ್ ಖರ್ಚಿಗಾಗಿ ಕನ್ನಡಿಗರ ಜೇಬಿಗೆ ಕತ್ತರಿ ಹಾಕುತ್ತಿರುವ ಕರ್ನಾಟಕ ಕಾಂಗ್ರೆಸ್ ಎಂದು ಟೀಕೆ ಮಾಡಿದೆ.

ಇನ್ನು, ಆಸ್ತಿ ತೆರಿಗೆ ಹೆಚ್ಚಳ ಮಾಡಿರುವ ಕುರಿತು ಸಮರ್ಥನೆ ಮಾಡಿದ್ದ ಸಿಎಂ ಸಿದ್ದರಾಮಯ್ಯ, ನಾವು ಘೋಷಣೆ ಮಾಡಿರುವ ಗ್ಯಾರಂಟಿ ಯೋಜನೆ ಜಾರಿಗೆ ತರಬೇಕಾದರೆ 50-60 ಸಾವಿರ ಕೋಟಿ ರೂ. ಬೇಕು. ಇದಕ್ಕೆ ಸಂಪನ್ಮೂಲ ಕ್ರೋಢೀಕರಣ ಮಾಡಬೇಕಾದರೆ ತೆರಿಗೆ ಹೆಚ್ಚಳ ಅನಿವಾರ್ಯ ಎಂದಿದ್ದಾರೆ.

ಇದರ ಬೆನ್ನಲ್ಲೇ ಬಿಜೆಪಿ ರಾಜ್ಯ ಸರ್ಕಾರದ ನಿರ್ಧಾರವನ್ನು ಕಟುವಾಗಿ ಟೀಕಿಸಿದೆ. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ನೀಡಿ ಕಾಂಗ್ರೆಸ್ ಜನರ ಕಣ್ಣಿಗೆ ಮಣ್ಣೆರಚುವ ನಿರ್ಧಾರ ಮಾಡುತ್ತಿದೆ ಎಂದಿದ್ದರು. ಇತ್ತೀಚೆಗೆ ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಆಕ್ರೋಶಕ್ಕೆ ಗುರಿಯಾಗಿತ್ತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ