ಆರ್ ಎಸ್ಎಸ್ ಚಡ್ಡಿ ಲೇವಡಿ ಮಾಡಿದ್ದ ಕಾಂಗ್ರೆಸ್: ಜವಹರಲಾಲ್ ನೆಹರೂ ಫೋಟೋ ರಿಲೀಸ್ ಮಾಡಿದ ಬಿಜೆಪಿ

Krishnaveni K

ಶುಕ್ರವಾರ, 24 ಅಕ್ಟೋಬರ್ 2025 (12:47 IST)
Photo Credit: Facebook

ಬೆಂಗಳೂರು: ಆರ್ ಎಸ್ಎಸ್ ವಿರುದ್ಧ ಕೆಂಡ ಕಾರುತ್ತಿರುವ ಕಾಂಗ್ರೆಸ್ ನಾಯಕರು ಸಂಘದ ಸಮವಸ್ತ್ರವನ್ನೂ ಟೀಕಿಸಿದ್ದರು. ಇದರ ಬೆನ್ನಲ್ಲೇ ಈಗ ಬಿಜೆಪಿ ಬೆಂಬಲಿಗರು ಜವಹರಲಾಲ್ ನೆಹರೂ ಇದೇ ರೀತಿಯ ಸಮವಸ್ತ್ರದಲ್ಲಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಿದ್ದಾರೆ.

ಕಾಂಗ್ರೆಸ್ ನಾಯಕರಾದ ಬಿಕೆ ಹರಿಪ್ರಸಾದ್, ಪ್ರಿಯಾಂಕ್ ಖರ್ಗೆ ಸೇರಿದಂತೆ ಅನೇಕ ನಾಯಕರು ಚಡ್ಡಿ ಹಾಕಿಕೊಂಡು ದೊಣ್ಣೆ ಹಿಡಿದುಕೊಂಡು ರಸ್ತೆಯಲ್ಲಿ ಪಥಸಂಚಲನ ಮಾಡುವುದು ಯಾಕೆ ಎಂದು ಆರ್ ಎಸ್ಎಸ್ ವಿರುದ್ಧ ಕೆಂಡ ಕಾರಿದ್ದರು.

ಇದರ ಬೆನ್ನಲ್ಲೇ ಈಗ ಬಿಜೆಪಿ ಬೆಂಬಲಿಗರು ಸೋಷಿಯಲ್ ಮಿಡಿಯಾದಲ್ಲಿ ಭಾರತದ ಪ್ರಥಮ ಪ್ರಧಾನಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುತ್ತಜ್ಜ ಜವಹರಲಾಲ್ ನೆಹರೂ ಅವರು ಆರ್ ಎಸ್ಎಸ್ ಸಮವಸ್ತ್ರವನ್ನೇ ಹೋಲುವ ದಿರಿಸಿನಲ್ಲಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹರಿಯಬಿಡುತ್ತಿದ್ದಾರೆ.

ಈ ಫೋಟೋಗಳಲ್ಲಿ ನೆಹರೂ ಅವರೂ ಚಡ್ಡಿ ಹಾಕಿಕೊಂಡಿದ್ದಾರೆ. ಹಾಗಿದ್ದರೆ ಅವರಿಗೆ ಏನು ಹೇಳ್ತಾರೆ ಈಗಿನ ಕಾಂಗ್ರೆಸ್ ನಾಯಕರು ಎಂದು ಪ್ರಶ್ನೆ ಮಾಡಿದ್ದಾರೆ. ಜವಹರಲಾಲ್ ನೆಹರೂ ಸೇವಾ ದಳದ ಸಮವಸ್ತ್ರದಲ್ಲಿರುವಾಗ ತೆಗೆದ ಫೋಟೋಗಳಿವು. ಇದನ್ನಿಟ್ಟುಕೊಂಡು ಈಗ ಬಿಜೆಪಿ ಬೆಂಬಲಿಗರು ಕಾಂಗ್ರೆಸ್ಸಿಗರಿಗೆ ಟಾಂಗ್ ಕೊಡುತ್ತಿದ್ದಾರೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ