ಲೋಕಸಭೆ ಚುನಾವಣೆ ಮುಗಿದ ಬಳಿಕ ನಂದಿನಿ ಹಾಲಿನ ದರ ಏರಿಕೆಯಾಗಿತ್ತು. ಇದರ ಬೆನ್ನಲ್ಲೇ ಡೀಸೆಲ್, ಪೆಟ್ರೋಲ್ ಮೇಲಿನ ತೆರಿಗೆ ಹೆಚ್ಚಳ ಮಾಡಿ ಮಧ್ಯಮ ವರ್ಗದವರ ಜೇಬಿಗೆ ಕತ್ತರಿ ಹಾಕಲಾಗಿತ್ತು. ಇದೀಗ ಮತ್ತೊಮ್ಮೆ ರೈತರಿಗೆ ಅನುಕೂಲ ಮಾಡಿಕೊಡುವ ನೆಪದಲ್ಲಿ ನಂದಿನಿ ಹಾಲಿನ ದರ ಏರಿಕೆಗೆ ಸರ್ಕಾರ ಮುಂದಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ರಾಜ್ಯದ ಜನರನ್ನು ಸಂಕಷ್ಟಗಳ ಕೂಪಕ್ಕೆ ತಳ್ಳಿರುವ ಸಿದ್ದರಾಮಯ್ಯನವರೇ, ತಮ್ಮ ಹೆಸರನ್ನು ಕತ್ತರಿರಾಮಯ್ಯ ಎಂದು ಬದಲಾಯಿಸಿಕೊಳ್ಳುವುದು ಒಳಿತು. ಮತ್ತೆ ಹಾಲಿನ ದರ ಏರಿಕೆಗೆ ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ಬಿಜೆಪಿ ಪ್ರತಿಕ್ರಿಯಿಸಿದೆ.