ರಾಗಿಗುಡ್ಡ ಘಟನೆ: ಸತ್ಯ ತಿಳಿಯಲು ಬಿಜೆಪಿ ಟೀಂ ಸ್ಥಳಕ್ಕೆ ಭೇಟಿ

ಗುರುವಾರ, 5 ಅಕ್ಟೋಬರ್ 2023 (09:10 IST)
ಶಿವಮೊಗ್ಗ: ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸತ್ಯಶೋಧನಾ ಟೀಂ ಇಂದು ಸ್ಥಳಕ್ಕೆ ಭೇಟಿ ನೀಡಲಿದೆ.

ಘಟನೆ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ರಾಜ್ಯ ಸರ್ಕಾರಕ್ಕೆ ವಿಪಕ್ಷಗಳು ಒತ್ತಾಯ ಹೇರಿವೆ.  ಈ ಬೆಳವಣಿಗೆಯ ಮಧ್ಯೆಯೇ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಲಿದೆ.

ಮೊದಲು ಮೆಗ್ಗಾನ್ ಆಸ್ಪತ್ರೆಯಲ್ಲಿರುವ ಗಾಯಾಳುಗಳ ಆರೋಗ್ಯ ವಿಚಾರಿಸಲಿರುವ ಬಿಜೆಪಿ ತಂಡ ಬಳಿಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ಸತ್ಯಾಸತ್ಯತೆ ಪರಿಶೀಲಿಸಲಿದೆ. ಬಳಿಕ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದೆ. ಬಿಜೆಪಿಯ ಘಟಾನುಘಟಿ ನಾಯಕರು ಜೊತೆಗಿರಲಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ