H.D.ದೇವೇಗೌಡ ಅವರನ್ನು ಆಹ್ವಾನಿಸಿಲ್ಲ ಎನ್ನುವ JDS ಆರೋಪಕ್ಕೆ BJP ತಿರುಗೇಟು ಕೊಟ್ಟಿದೆ. ಅಲ್ಲದೇ ದೇವೇಗೌಡರಿಗೆ ಆಹ್ವಾನ ಕೊಟ್ಟಿರುವುದಕ್ಕೆ ಸಾಕ್ಷಿ ಬಿಡುಗಡೆ ಮಾಡಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ BJP, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಲೆಟರ್ ಹೆಡ್ ಮೂಲಕ ಕೆಂಪೇಗೌಡರ ಪ್ರಗತಿ ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಬರುವಂತೆ ದೇವೇಗೌಡ್ರಿಗೆ ಆಹ್ವಾಸಿದ್ರು ಎಂದು ಲೆಟರ್ ಪೋಸ್ಟ್ ಮಾಡಿದೆ. ಈ ಪತ್ರವನ್ನು ಟ್ವೀಟ್ ಮಾಡಿ JDSಗೆ ಬಿಜೆಪಿ ತಿರುಗೇಟು ನೀಡಿದೆ. ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ದೇವೇಗೌಡರಿಗೇ ಮೊದಲ ಆಹ್ವಾನ ಪತ್ರ ಹೋಗಿದ್ದು ಮಾತ್ರವಲ್ಲ, ಖುದ್ದು ಬಸವರಾಜ ಬೊಮ್ಮಾಯಿಯವರೇ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ JDS ತನ್ನ ಸಮಯಸಾಧಕ ಬುದ್ಧಿ ಪ್ರದರ್ಶಿಸಿದೆ ಎಂದು ತಿರುಗೇಟು ಕೊಟ್ಟಿದೆ.