ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಗೌಡ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ

Sampriya

ಬುಧವಾರ, 27 ಮಾರ್ಚ್ 2024 (16:46 IST)
Photo Courtesy Facebook
ಬೆಂಗಳೂರು:  ಲೋಕಸಭೆ ಚುನಾವಣೆಯಲ್ಲಿ  ಬೆಂಗಳೂರು ಗ್ರಾಮಾಂತರ ಇಲ್ಲವೇ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್‌ ಆಕಾಂಕ್ಷಿಯಾಗಿದ್ದ ತೇಜಸ್ವಿನಿ ಗೌಡ ಅವರು ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದರು.

ಬಿಜೆಪಿ ವಲಯದಲ್ಲಿ ತೇಜಸ್ವಿನಿ ಗೌಡ ನಡೆ ಹೊಸ ಸಂಚಲನವನ್ನು ಮೂಡಿಸಿದೆ. ವಿಧಾನಪರಿಷತ್​ ಸಭಾಪತಿ ಬಸವರಾಜ್​ ಹೊರಟ್ಟಿ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ಸಲ್ಲಿಸಿದ್ದ ತೇಜಸ್ವಿನಿ ಗೌಡ ತಾವು ಸ್ವಇಚ್ಛೆಯಿಂದ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್​ ಸದಸ್ಯ ಸ್ಥಾನದ ಅವಧಿ ಜೂನ್ 24ಕ್ಕೆ ಮುಕ್ತಾಯವಾಗುತ್ತಿತ್ತು.

ಇನ್ನೂ ತೇಜಸ್ವಿನಿ ಗೌಡ ರಾಜೀನಾಮೆ ಬೆನ್ನಲ್ಲೇ ಅವರು ಕಾಂಗ್ರೆಸ್ ಸೇರಲಿದ್ದಾರೆಂಬ ಸುದ್ದಿ ಹರಿದಾಡುತ್ತಿದೆ. ಕಳೆದ 20 ವರ್ಷಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿರುವ ತೇಜಸ್ವಿನಿ ಗೌಡ ಅವರು 2004ರಲ್ಲಿ ಕನಕಪುರ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಿ ಮಾಜಿ ಪ್ರಧಾನಿ ಎಚ್.​ಡಿ. ದೇವೇಗೌಡ ಅವರನ್ನೇ ಸೋಲಿಸಿದ್ದರು. ನಂತರ ದಿನಗಳಲ್ಲಿ ಇವರು ಬಿಜೆಪಿ ಸೇರಿದರು. ಬಿಜೆಪಿ ಇವರನ್ನು ವಿಧಾನ ಪರಿಷತ್​ ಸದಸ್ಯೆಯನ್ನಾಗಿ ಮಾಡಿತು.

ತೇಜಸ್ವಿನಿ ಅವರು 2024ರ ಲೋಕಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ