ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಮಾಲಿಕರ ಮನೆಯಲ್ಲಿ ಬಿಜೆಪಿ ಸಂಕ್ರಾಂತಿ

Krishnaveni K

ಮಂಗಳವಾರ, 14 ಜನವರಿ 2025 (10:26 IST)
ಬೆಂಗಳೂರು: ಚಾಮರಾಜಪೇಟೆಯ ಹಸುವಿನ ಕೆಚ್ಚಲು ಕೊಯ್ದ ಪ್ರಕರಣದ ಮಾಲಿಕನ ಮನೆಯಲ್ಲಿ ಇಂದು ಬಿಜೆಪಿ ನಾಯಕರು ಸಂಕ್ರಾಂತಿ ಹಬ್ಬ ಆಚರಿಸಲಿದ್ದಾರೆ.

ಕಾಟನ್ ಪೇಟೆಯ ಹಸುವಿನ ಮಾಲಿಕ ಕರ್ಣ ಮನೆಗೆ ಬಿಜೆಪಿ ನಾಯಕರು ಭೇಟಿ ನೀಡಲಿದ್ದಾರೆ. ಬಳಿಕ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಸಂಕ್ರಾಂತಿ ಹಬ್ಬವನ್ನೂ ಅವರ ಜೊತೆಗೇ ಆಚರಿಸಿಕೊಳ್ಳಲಿದ್ದಾರೆ ಎಂದು ಬಿಜೆಪಿ ಮಾಧ್ಯಮ ಪ್ರಕಟಣೆ ನೀಡಿದೆ.

ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್ ಅಶೋಕ್, ಸಂಸ ಪಿಸಿ ಮೋಹನ್, ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಸೇರಿದಂತೆ ಬಿಜೆಪಿ ನಾಯಕರು ಹಸುವಿನ ಮಾಲಿಕರ ಮನೆಗೆ ಭೇಟಿ ನೀಡಲಿದ್ದಾರೆ.

ಹಸುವಿನ ಕೆಚ್ಚಲು ಕೊಯ್ದ ಪ್ರಕರಣದಲ್ಲಿ ಈಗಾಗಲೇ ಶೇಖ್ ನಸ್ರು ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣ ಈಗ ರಾಜಕೀಯ ತಿರುವು ಪಡೆದುಕೊಂಡಿದ್ದು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ರಾಜ್ಯ ಸರ್ಕಾರದ ಮುಸ್ಲಿಂ ಓಲೈಕೆಯ ಪರಿಣಾಮ ಎಂದು ನಿನ್ನೆ ವಿಪಕ್ಷ ನಾಯಕ ಆರ್ ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ