ಚುನಾವಣಾ ಟಿಕೆಟ್ ವಿತರಿಸಲು ಬಿಜೆಪಿಯಿಂದ ಸಮೀಕ್ಷೆ: ಯಡಿಯೂರಪ್ಪ

ಸೋಮವಾರ, 26 ಜೂನ್ 2017 (19:13 IST)
2018 ರ ವಿಧಾನಸಭಾ ಚುನಾವಣೆಗೆ ಟಿಕೆಟ್ ವಿತರಣೆಗಾಗಿ ಬಾಹ್ಯ ಸಂಸ್ಥೆಯಿಂದ ಸಮೀಕ್ಷೆಯನ್ನು ನಡೆಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.
 
ಪ್ರತಿಸ್ಪರ್ಧಿ ಪಕ್ಷಗಳ ಹಲವಾರು ಶಾಸಕರು ಬಿಜೆಪಿಗೆ ಸೇರ್ಪಡೆಯಾಗಲು ಬಯಸುತ್ತಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ನಾಯಕರು ಸೇರ್ಪಡೆಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.
 
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ ಪ್ರತಿಕ್ರಿಯೆ ನೀಡಿದ ಅವರು, ಮುಂದಿನ ವರ್ಷದಲ್ಲಿ ಚುನಾವಣೆಗಳು ನಡೆಯಲಿರುವುದರಿಂದ ಅತ್ಯುತ್ತಮವಾದ ಅಭ್ಯರ್ಥಿ ಯಾರು ಎಂದು ಕಂಡುಹಿಡಿಯಲು ಸಮೀಕ್ಷೆಯನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. 
 
ಮುಂದಿನ ಎರಡು ತಿಂಗಳಲ್ಲಿ ಬಾಹ್ಯ ಸಂಸ್ಥೆಯಿಂದ ಸಮೀಕ್ಷೆಯನ್ನು ಆರಂಭಿಸಲಾಗುತ್ತಿತ್ತು, ಸಮೀಕ್ಷೆಯಿಂದ ಅತ್ಯುತ್ತಮ ಅಭ್ಯರ್ಥಿಯ ಆಯ್ಕೆ ಬಗ್ಗೆ ನಿಖರವಾದ ಚಿತ್ರಣ ದೊರೆಯಲಿದೆ ಎಂದರು. 
 
ಕಳೆದ ಮೇ ತಿಂಗಳಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಆದೇಶದ ಮೇರೆಗೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಹಸ್ಯ ಸಮೀಕ್ಷೆಯನ್ನು ನಡೆಸಲಾಗಿತ್ತು. ಸಮೀಕ್ಷೆಯ ಫಲಿತಾಂಶದ ಆಧಾರದ ಮೇರೆಗೆ ಬಿಜೆಪಿ ಚುನಾವಣಾ ರಣತಂತ್ರ, ಅಭ್ಯರ್ಥಿಗಳ ಆಯ್ಕೆಯನ್ನು ಅಂತಿಮಗೊಳಿಸಲಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.  

ವೆಬ್ ದುನಿಯಾ ಫ್ಯಾಂಟಸಿ ಕ್ರಿಕೆಟ್ ಲೀಗ್: ಆಡಿ 2.5 ಲಕ್ಷ ರೂ. ಮೌಲ್ಯದ ಬಹುಮಾನ ಗೆಲ್ಲಿ.. ವೆಬ್ ದುನಿಯಾ ಫ್ಯಾಂಟಸಿ ಲೀಗ್`ನಲ್ಲಿ ಭಾಗವಹಿಸಲು ಈ ಲಿಂಕ್ ಕ್ಲಿಕ್ ಮಾಡಿ.
 
http://kannada.fantasycricket.webdunia.com/

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ