ಕೈ ನಾಯಕರಿಗೆ 10 ಪ್ರಶ್ನೆ ಎಸೆದ ಬಿಜೆಪಿ

ಶನಿವಾರ, 23 ಮಾರ್ಚ್ 2019 (14:53 IST)
ಬಿ.ಎಸ್.ಯಡಿಯೂರಪ್ಪ ಡೈರಿ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಿಗೆ ಮಾಜಿ ಸಚಿವ ಸಿ.ಟಿ.ರವಿ ಹತ್ತು ಪ್ರಶ್ನೆಗಳನ್ನು ಕೇಳಿದ್ದು, ಅವು ಈಗ ವೈರಲ್ ಆಗಿವೆ.
ಡೈರಿ ನಿಮಗೆ ಸಿಕ್ಕಿದ್ದು ಯಾವಾಗ..?
ಯಾರು ಈ ಡೈರಿಯನ್ನು ತಂದುಕೊಟ್ಟರು?
ಡೈರಿಯನ್ನು ಎಲ್ಲಿ ಕೊಟ್ಟರು..?
ಒರಿಜಿನಲ್ ಡೈರಿ ಎಲ್ಲಿ?
ಯಾಕೆ ಇದುವರೆಗೂ ಈ ಡೈರಿ ಆಧರಿಸಿ ಲೋಕಾಯುಕ್ತ ಅಥವಾ ಎಸಿಬಿಗೆ ದೂರು ಕೊಡಲಿಲ್ಲ?
2013 ಮೇ ತಿಂಗಳಿನಿಂದ ನಿಮ್ಮದೇ ಪಕ್ಷದ ಆಡಳಿತ ಇದ್ದರೂ ಯಾವುದೇ ತನಿಖೆ ನಡೆಸದೇ ಇರಲು ಕಾರಣವೇನು?
ಯಡಿಯೂರಪ್ಪನವರದ್ದೆಂದು ಹೇಳಲಾದ ಡೈರಿಯು ಡಿ.ಕೆ.ಶಿವಕುಮಾರ್ ಮನೆಯಲ್ಲಿ ಪತ್ತೆಯಾಗಿದ್ದು ಹೇಗೆ? ಇದಕ್ಕೆ ಡಿ.ಕೆ.ಶಿವಕುಮಾರ್ ಉತ್ತರಿಸಬೇಕಾಗಿದೆ.
ಈ ಹಿಂದೆ ಪ್ರಕರಣವೊಂದರ ಬಗ್ಗೆ ಎಸಿಬಿಗೆ ದೂರು ನೀಡಿದ್ದ ಕಾಂಗ್ರೆಸ್ ಈಗ ಏಕೆ ದೂರು ನೀಡದಿರಲು ಕಾರಣವೇನು?
ಎಂಎಲ್ ಸಿ ಗೋವಿಂದರಾಜು‌ ಮನೆಯಲ್ಲಿ ಐಟಿ ಅಧಿಕಾರಿಗಳು ವಶಪಡಿಸಿಕೊಂಡ ಡೈರಿಯಲ್ಲಿ ಕಾಂಗ್ರೆಸ್ ನಾಯಕರಿಗೆ ಹಣ ಸಂದಾಯವಾಗುತ್ತು ಎಂದು ನಮೂದಾಗಿತ್ತು. ಆಗ ಯಡಿಯೂರಪ್ಪ ಡೈರಿ ಕಾಂಗ್ರೆಸ್ ಪ್ರಾಯೋಜಕತ್ವದಲ್ಲಿ ಸೃಷ್ಟಿಯಾಗಿದ್ದು ನಿಜವಲ್ಲವೇ?
ಡೈರಿ ಪ್ರಕರಣ ಜನ‌ಲೋಕಪಾಲ್ ತನಿಖೆಗೆ ಸೂಕ್ತವಾದುದು ಎಂದು ಕಾಂಗ್ರೆಸ್ ಹೇಳುತ್ತಿದೆ. ಆರೋಪ ಮಾಡಿದವರು ದೂರು ನೀಡಬೇಕೆ ಅಥವಾ ದೂರಿಗೆ ಒಳಗಾದವರೇ?


ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ