ಇಂದಿನಿಂದ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆ
ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳಲ್ಲಿ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನೆಲೆ ರಾಜ್ಯದ ಪ್ರಮುಖ ಮೂರು ಪಕ್ಷಗಳು ಚುನಾವಣೆಗೆ ಸಾಕಷ್ಟು ಸಿದ್ದತೆ ನಡೆಸಿವೆ. ಭಾರತೀಯ ಜನತಾ ಪಾರ್ಟಿ ಜೋರಾಗಿಯೇ ಪ್ರಚಾರದ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಕರ್ನಾಟಕದಲ್ಲಿ ಮತ್ತೆ ಕಮಲ ಅರಳಿಸಲು ಟೊಂಕ ಕಟ್ಟಿ ನಿಂತಿದೆ. ಈ ಹಿನ್ನೆಲೆ ಪಕ್ಷದ ರಾಜ್ಯ ನಾಯಕರು, ಕೇಂದ್ರ ನಾಯಕರನ್ನು ರಾಜ್ಯಕ್ಕೆ ಕರೆಸಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಅದರಂತೆ ಈಗಾಗಲೇ ಚುನಾವಣಾ ಚಾಣಕ್ಯ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಇಂದಿನಿಂದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಪ್ರಾರಂಭವಾಗಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಚಾಮರಾಜನಗರದ ಮಲೆಮಹದೇಶ್ವರ ಬೆಟ್ಟದಿಂದ ಆರಂಭವಾಗುವ ಯಾತ್ರೆಗೆ ಚಾಲನೆ ನೀಡಿದ್ದಾರೆ.