ದಕ್ಷಿಣ ಕನ್ನಡ ಜಿಲ್ಲೆಯಬಂಟ್ವಾಳ ತಾಲೂಕಿನ ಕಾವಳಕಟ್ಟೆಯಲ್ಲಿ ನಡೆದಿದೆ.
ಭಿನ್ನ ಉದ್ದೇಶಗಳಿಗೆ ಪ್ರತಿಭಟನೆ ನಡೆಸಲು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಜಮಾಯಿಸಿದ್ದಾಗ ಈ ಘಟನೆ ನಡೆದಿದೆ. ಕಾವಳಮೂಡೂರು ಸೇವಾ ಸಹಕಾರಿ ಸಂಘದಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಬಿಜೆಪಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಇದೇ ವೇಳೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಾವಳಮೂಡೂರು ಗ್ರಾ.ಪಂ. ನೀರು ಹಾಗೂ ಮನೆ ತೆರಿಗೆ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದರು. ಈ ಸಂದರ್ಭದಲ್ಲಿ ಎರಡು ಪಕ್ಷದ ಕಾರ್ಯಕರ್ತರ ನಡುವೆ ತಳ್ಳಾಟ ನಡೆದಿದೆ. ಆರ್.ಟಿ.ಐ.ಕಾರ್ಯಕರ್ತ ಪದ್ಮನಾಭ ಮಯ್ಯ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಈ ವೇಳೆ ಉಭಯ ಪಕ್ಷದ ಕಾರ್ಯಕರ್ತರು ಧಿಕ್ಕಾರ ಕೂಗಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿತು.
ಪುಂಜಾಲಕಟ್ಟೆ ಎಸ್ ಐ ಸೌಮ್ಯ ಮಧ್ಯಪ್ರವೇಶಿಸಿ ಪರಿಸ್ಥಿತಿ ಹತೋಟಿಗೆ ತಂದರು. ಕಾರ್ಯಕರ್ತರನ್ನು ಲಾಟಿ ಬೀಸಿ ಪೊಲೀಸರು ಚದುರಿಸಿದರು.
ಪುಂಜಾಲಕಟ್ಟೆ ಪೋಲೀಸರು ಆಸ್ಪತ್ರೆಯಲ್ಲಿ ದಾಖಲಾದವರ ಹೇಳಿಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸುತ್ತಿದ್ದಾರೆ. ಸುದ್ದಿ ತಿಳಿದು ಡಿ.ವೈ.ಎಸ್.ಪಿ.ವೆಲೆಂಟೈನ್ ಡಿ.ಸೋಜ, ಬೆಳ್ತಂಗಡಿ ವೃತ್ತ ನಿರೀಕ್ಷಕ ಶಿವಕುಮಾರ್ ಸ್ಥಳಕ್ಕಾಗಮಿಸಿದರು.