ನೂರಕ್ಕೆ ನೂರು ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತೆ: ಬಿಎಸ್ ಯಡಿಯೂರಪ್ಪ

Sampriya

ಭಾನುವಾರ, 16 ಮಾರ್ಚ್ 2025 (12:58 IST)
ಬೆಳಗಾವಿ: ಬಿಜೆಪಿಯ ವಾತಾವರಣ ತುಂಬಾ ಚೆನ್ನಾಗಿದೆ.  ಮುಂದಿನ ದಿನಗಳಲ್ಲಿ ನೂರಕ್ಕೆ ನೂರು ಬಿಜೆಪಿ ಪಕ್ಷ ಅಧಿಕಾರಕ್ಕೆ ಬರುತ್ತೆ. ಪಕ್ಷವನ್ನು ಮತ್ತೇ ಅಧಿಕಾರಕ್ಕೆ ತರುವಲ್ಲಿ ನಮ್ಮ ಪ್ರಯತ್ನ ಮುಂದುವರೆಯುತ್ತದೆ ಎಂದು ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಹೇಳಿದರು.

ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗೆ ಅರ್ಥವಿಲ್ಲ. ಜನರನ್ನು ತೃಪ್ತಿ ಪಡಿಸುವ ಸಲುವಾಗಿ ಈ ಯೋಜನೆಯನ್ನು ಜಾರಿ ಮಾಡಲಾಗಿದೆ.  ಮಾಡಿರುವ ಘೋಷಣೆಗಳು ಯಾವುದು ಕಾರ್ಯರೂಪಕ್ಕೆ ಬರ್ತಾ ಇಲ್ಲ ಎಂದು ಆರೋಪ ಮಾಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿದ ಬಜೆಟ್‌ನಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವುದು ಗೊತ್ತಿರುವ ವಿಚಾರ. ಸದ್ಯ ಬಿಜೆಪಿ ಪಕ್ಷದಲ್ಲಿ ಒಳ್ಳೆಯ ವಾತಾವರಣವಿದ್ದು, ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದೇ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ