ಗ್ಯಾರಂಟಿ ಬಗ್ಗೆ ಅಪಪ್ರಚಾರ ಮಾಡುವ ಬಿಜೆಪಿಗೆ ಮತ್ತೊಮ್ಮೆ ಮುಖಭಂಗವಾಗಲಿದೆ: ಕಾಂಗ್ರೆಸ್

Sampriya

ಬುಧವಾರ, 14 ಆಗಸ್ಟ್ 2024 (19:21 IST)
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಹಿಂದಿನಿಂದಲೂ ಸುಳ್ಳನ್ನು ಪೊಣಿಸುತ್ತಿರುವ ಬಿಜೆಪಿ ನಮ್ಮ ಕರ್ನಾಟಕ ಮಾದರಿಯ ಗ್ಯಾರಂಟಿ ಯೋಜನೆಗಳನ್ನು ನಕಲು ಮಾಡಿ, ಅನುಕರಣೆ ಮಾಡುತ್ತಿದೆ ಎಂದು ಕಾಂಗ್ರೆಸ್ ವ್ಯಂಗ್ಯ ಮಾಡಿದೆ.

ಸದ್ಯ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಹಣವಿಲ್ಲ. ಬೊಕ್ಕಸ ಖಾಲಿಯಾಗಿರವ ಕಾರಣ ಗ್ಯಾರಂಟಿ ಯೋಜನೆಗಳನ್ನು ಶೀಘ್ರದಲ್ಲೇ ನಿಲ್ಲಿಸಲಿದೆ ಎಂದು ಬಿಜೆಪಿ ಟೀಕೆ ಮಾಡುತ್ತಿದೆ. ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿ ಯಾವುದೇ ಕಾರಣಕ್ಕೂ ಗ್ಯಾರಂಟಿ ನಿಲ್ಲಿಸಲ್ಲ ಎಂದು ಭರವಸೆಯನ್ನು ನೀಡಿದರು.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಕಾಂಗ್ರೆಸ್ , ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ ದಿನದಿಂದಲೂ ಬಿಜೆಪಿ ಒಂದಲ್ಲ ಒಂದು ಅಪಪ್ರಚಾರ ಮಾಡುತ್ತಿದ್ದಾರೆ.

ನಾವು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದಾಗ ಜಾರಿ ಮಾಡುವುದು ಅಸಾಧ್ಯ ಎಂದು ಅಪಹಾಸ್ಯ ಮಾಡಿದರು.

ಸರ್ಕಾರ ರಚಿಸಿದ ಮರುದಿನವೇ ಗ್ಯಾರಂಟಿ ಯೋಜನೆಗಳನ್ನು ಏಕೆ ಘೋಷಿಸಿಲ್ಲ ಎಂದು ಪ್ರಶ್ನಿಸಿದರು.

ನಾವು ಜಾರಿ ಮಾಡಿ ಯಶಸ್ವಿಯಾದ ನಂತರ ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುತ್ತಾರೆ ಎಂಬ ಅಪಪ್ರಚಾರ ಮಾಡುತ್ತಿದೆ ಬಿಜೆಪಿ ಕರ್ನಾಟಕ

ಇದೇ ನಿರ್ಲಜ್ಜ ಬಿಜೆಪಿ ನಮ್ಮ ಗ್ಯಾರಂಟಿ ಯೋಜನೆ ಜಾರಿ ಆದ ನಂತರ ಈ ಯೋಜನೆಗಳನ್ನು ನಕಲು ಮಾಡಿದೆ.
ಅಲ್ಲದೆ 'ಕರ್ನಾಟಕ ಮಾದರಿ'ಯನ್ನು ಇತರೆ ರಾಜ್ಯಗಳು ಅನುಕರಣೆ ಮಾಡುತ್ತಿವೆ.

ಬಿಜೆಪಿಯ ಅಪಪ್ರಚಾರವನ್ನು ಸುಳ್ಳಾಗಿಸುತ್ತಾ ಬಂದಿದ್ದೇವೆ, ಈಗ ಮತ್ತೊಮ್ಮೆ ಸುಳ್ಳಿನ ಬಿಜೆಪಿ ಮುಖಭಂಗ ಅನುಭವಿಸಲಿದೆ.

ಅರ್ಹ ಫಲಾನುಭವಿಗಳಿಗೆ ಗ್ಯಾರಂಟಿ ಯೋಜನೆಗಳನ್ನು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ