ರಾಜ್ಯದಲ್ಲಿ ಇನ್ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

ಬುಧವಾರ, 5 ಅಕ್ಟೋಬರ್ 2016 (12:52 IST)
ರಾಜ್ಯದಲ್ಲಿ ಇನ್ಮುಂದೆ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಅಧಿಕಾರ ಕೊಟ್ಟಾಗ ಇಡೀ ರಾಜ್ಯವನ್ನೇ ಕೊಳ್ಳೆ ಹೊಡೆದಿದ್ದಾರೆ. ಮಾಡಬಾರದ ಭ್ರಷ್ಟಾಚಾರ ಮಾಡಿ ಬಿ.ಎಸ್.ಯಡಿಯೂರಪ್ಪ ಜೈಲು ಸೇರಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
 
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿಯಿಂದ ತಮಿಳುನಾಡಿಗೆ ನೀರು ಬಿಟ್ಟರು ಸಹ ಜೂನ್ ತಿಂಗಳವರೆಗೂ ನೀರಿನ ಸಮಸ್ಯೆ ಉಂಟಾಗುವುದಿಲ್ಲ. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
 
ಹೇಮಾವತಿ ನದಿಯಿಂದ ತುಮಕೂರು ಜಿಲ್ಲೆಗೆ ಇಂದಿನಿಂದ ನೀರು ಬಿಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. 
 
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ