ಉಪಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವು ಖಚಿತ: ಬಿಜೆಪಿ

ಶುಕ್ರವಾರ, 31 ಮಾರ್ಚ್ 2017 (19:56 IST)
ಕಾಂಗ್ರೆಸ್ ಪಕ್ಷದವರು ವಲಸಿಗರಂತೆ ಪಕ್ಷದ ಅಭ್ಯರ್ಥಿಯ ಗೆಲುವಿಗಾಗಿ ಬೆಂಗಳೂರು ತೊರೆದು ಉಪಚುನಾವಣೆಗಾಗಿ ಬಂದಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ಲೇವಡಿ ಮಾಡಿದ್ದಾರೆ. 
 
ಬಿಜೆಪಿ ಅಭ್ಯರ್ಥಿ ವಿ.ಶ್ರೀನಿವಾಸ್ ಪ್ರಸಾದ್ ಪರ ಪ್ರಚಾರ ಕೈಗೊಂಡ ಅವರು, ಪ್ರಧಾನಿ ಮೋದಿಯವರ ಪಾರದರ್ಶಕ ಅಡಳಿತಕ್ಕೆ ಮೆಚ್ಚಿ ಜನತೆ ಬಿಜೆಪಿಯತ್ತ ಆಕರ್ಷಿತರಾಗುತ್ತಿದ್ದಾರೆ. ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ಕಳೆದ ನಲವತ್ತು ವರ್ಷಗಳಿಂದ ರಾಜಕೀಯದಲ್ಲಿರುವ ಶ್ರೀನಿವಾಸ್ ಪ್ರಸಾದ್, ಯಾವತ್ತೂ ತಮ್ಮ ಇಮೇಜ್‌ಗೆ ಧಕ್ಕೆ ಬರುವಂತಹ ಕಾರ್ಯ ಮಾಡಿಲ್ಲ. ಬಾಯಿ, ಕೈ ಶುದ್ಧವಾಗಿರಿಸಿಕೊಂಡಿದ್ದಾರೆ. ಆದರೆ, ಕಾಂಗ್ರೆಸ್ ಪಕ್ಷದವರ ಮೈತುಂಬಾ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ಆರೋಪಿಸಿದರು.  
 
ಉಪಚುನಾವಣೆಯಲ್ಲಿ ಬಿಜೆಪಿ ಪಕ್ಷ ಜಯಗಳಿಸಲಿದೆ ಎನ್ನುವ ವರದಿಗಳಿಂದ ಆತಂಕಗೊಂಡ ಸಿಎಂ ಸಿದ್ದರಾಮಯ್ಯ, ಪ್ರತಿಯೊಂದು ಜಿಲ್ಲಾ ಪಂಚಾಯಿತಿಗೊಂದರಂತೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ ಎಂದು ಬಿಜೆಪಿ ಮುಖಂಡ ಸುರೇಶ್ ಕುಮಾರ್ ವ್ಯಂಗ್ಯವಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ವೆಬ್ದುನಿಯಾವನ್ನು ಓದಿ