ಬಿಜೆಪಿಗೆ ಮೊದಲ ಬಾರಿ ಒಲಿದ ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ!

ಬುಧವಾರ, 25 ಆಗಸ್ಟ್ 2021 (14:27 IST)
ಸಾಂಸ್ಕೃತಿಕ ನಗರಿ ಮೈಸೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ ಇದೇ ಮೊದಲ ಬಾರಿ ಬಿಜೆಪಿ ಪಾಲಾಗಿದೆ.
ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಜೆಡಿಎಸ್ ಬೆಂಬಲ ಘೋಷಿಸಿದ್ದರಿಂದ ಕಾಂಗ್ರೆಸ್ ಜೆಡಿಎಸ್ ವಿರುದ್ಧ ಧಿಕ್ಕಾರ ಕೂಗಿ ಸಭೆಯನ್ನು ಬಹಿಷ್ಕರಿಸಿತು.
72 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿ ಮೇಯರ್ ಅಭ್ಯರ್ಥಿ ಸುನಂದಾ ಪಾಲನೇತ್ರ 26 ಮತಗಳನ್ನು ಪಡೆದು ಮೇಯರ್ ಆಗಿ ಆಯ್ಕೆಯಾದರೆ, ಕಾಂಗ್ರೆಸ್ ಅಭ್ಯರ್ಥಿ ಶಾಂತಕುಮಾರಿ ಪರ 22 ಮತಗಳನ್ನು ಪಡೆದರು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ