ಪ್ರಧಾನಿ ಮೋದಿ ಕಾರ್ಯವೈಖರಿಯನ್ನು ಅಟಲ್‌ಜೀ ನೋಡುವ ಸ್ಥಿತಿಯಲ್ಲಿಲ್ಲ: ಬಿಜೆಪಿ

ಭಾನುವಾರ, 25 ಡಿಸೆಂಬರ್ 2016 (12:21 IST)
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಜೀ ಅವರು ಯಾರನ್ನು ಗುರುತಿಸುವ ಸ್ಥಿತಿಯಲಿಲ್ಲ. ಆದರೆ, ಅವರು ನೆಟ್ಟ ಮರ ಹೆಮ್ಮರವಾಗಿ ಬೆಳೆದಿದೆ. ಪ್ರಧಾನಿ ಮೋದಿ ಅವರ ಕಾರ್ಯವೈಖರಿಯನ್ನು ನೋಡಬೇಕಿತ್ತು. ಆದರೆ, ಅಟಲ್‌ಜೀ ಅವರು ಆ ಸ್ಥಿತಿಯಲಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಅವರು ಭಾವುಕರಾದರು. 
 
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಇಂದು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಸುಶಾಸನ ದಿನವಾಗಿ ಆಚರಿಸಲಾಯಿತು. ಈ ವೇಳೆ ಕೇಂದ್ರ ಸಚಿವ ಸದಾನಂದಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಸೇರಿದಂತೆ ಹಲವು ಗಣ್ಯ ನಾಯಕರು ಉಪಸ್ಥಿತರಿದ್ದರು.
 
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಅವರು, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಜೀ ಅವರು 26 ಪಕ್ಷಗಳನ್ನು ಸೇರಿಸಿ 6 ವರ್ಷ ಉತ್ತಮ ಆಡಳಿತ ನೀಡಿದ್ದರು. ಇಂತಹ ಉತ್ತಮ ಆಡಳಿತಗಾರ ಮತ್ತೊಬ್ಬರು ಇರಲು ಸಾಧ್ಯವೇ ಇಲ್ಲ ಎಂದು ಅಭಿಪ್ರಾಯಪಟ್ಟರು. 
 
ನಮ್ಮ ದೇಶಕ್ಕೆ ಉತ್ತಮ ರಸ್ತೆಗಳನ್ನು ಕೊಡುಗೆಯಾಗಿ ನೀಡಿದ್ದ ಅಟಲ್ ಬಿಹಾರಿ ವಾಜಪೇಯಿ ಅವರು, ಕವಿ, ವಾಗ್ಮಿ ಹಾಗೂ ರಾಷ್ಟ್ರಧರ್ಮ ಪತ್ರಿಕೆಯ ಸಂಪಾದಕರು ಆಗಿದ್ದರು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ಅವರು ಪ್ರಶಂಸೆ ವ್ಯಕ್ತಪಡಿಸಿದರು.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ವೆಬ್ದುನಿಯಾವನ್ನು ಓದಿ