ಭ್ರಷ್ಟರಿಗೆ ಬಿಜೆಪಿ ಮಣೆ ಹಾಕುವುದಿಲ್ಲ
ನೀರಾವರಿ ಮತ್ತೆ ಲೋಕೋಪಯೋಗಿ ಇಲಾಖೆಯಲ್ಲಿನ ಟೆಂಡರ್ ಕಮೀಷನ್ ವಿಚಾರದ ದಾಖಲೆಯನ್ನು ಬಿಡುಗಡೆ ಮಾಡಲಿ. ಎಲ್ಲರನ್ನೂ ತನಿಖೆಗೆ ಒಳಪಡಿಸಲಿ. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪಿಡಬ್ಲ್ಯೂಡಿ ಸಚಿವ ಗೋವಿಂದ ಕಾರಜೋಳ ತಿರುಗೇಟು ನೀಡಿದ್ದಾರೆ.ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೇ. 40ರಷ್ಟು ಕಮೀಷನ್ ದರದ ಬೇಡಿಕೆ ಇರಿಸಲಾಗುತ್ತಿದೆ ಎನ್ನುವ ಗುತ್ತಿಗೆದಾರರ ಸಂಘದ ಆರೋಪದ ಕುರಿತು ಸಮಗ್ರ ತನಿಖೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ಆದೇಶ ಮಾಡಿದ್ದಾರೆ. ತನಿಖೆ ಮಾಡಿ ವರದಿ ಬಂದ ತಕ್ಷಣ ನಿರ್ದಾಕ್ಷಿಣ್ಯವಾಗಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಯಾರೇ ತಪ್ಪು ಮಾಡಿರಲಿ, ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.