ಆಂಧ್ರದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ: ಆರ್ ಅಶೋಕ್, ವಿಜಯೇಂದ್ರ ಆಕ್ರೋಶ

Krishnaveni K

ಗುರುವಾರ, 24 ಜುಲೈ 2025 (11:03 IST)
ಬೆಂಗಳೂರು: ಆಂಧ್ರಪ್ರದೇಶದಲ್ಲಿ ಕರ್ನಾಟಕದ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆ ನಡೆಸಲಾಗಿದ್ದು, ಶೀಘ್ರವೇ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ  ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ.

ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರಾಗಿದ್ದ ಕೆವಿ ಪ್ರಶಾಂತ್ ರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿ ರೆಡ್ಡಿಯವರನ್ನು ಆಂಧ್ರಪ್ರದೇಶದಲ್ಲಿ ಹತ್ಯೆ ಮಾಡಲಾಗಿದೆ. ಈ ಬಗ್ಗೆ ವಿಜಯೇಂದ್ರ ಟ್ವೀಟ್ ಮಾಡಿದ್ದು ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರಾಗಿದ್ದ ಕೆ.ವಿ. ಪ್ರಶಾಂತ್ ರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಅವರು ಹತ್ಯೆಗೀಡಾಗಿರುವ ಘಟನೆ ಅತ್ಯಂತ ಅಮಾನವೀಯ ಹಾಗೂ ದುಃಖಕರ, ಈ ದುರ್ಘಟನೆಯನ್ನು ಖಂಡಿಸಿ ಮೃತರ ಆತ್ಮಕ್ಕೆ ಶಾಂತಿ ಕೋರುವೆ.

ಕೊಲೆಗಡುಕರನ್ನು ಬಂಧಿಸುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ತನಿಖೆ ಚುರುಕುಗೊಳಿಸಲಿ, ನೊಂದ ಕುಟುಂಬಕ್ಕೆ ನ್ಯಾಯ ಸಿಗಲಿ. ಮೃತರ ಕುಟುಂಬ ವರ್ಗದವರಿಗೆ ಈ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ’ ಎಂದಿದ್ದಾರೆ.

ಇನ್ನು ಆರ್ ಅಶೋಕ ಕೂಡಾ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಮಹದೇವಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತ ಕೆ.ವಿ. ಪ್ರಶಾಂತ್ ರೆಡ್ಡಿ ಹಾಗೂ ಅವರ ತಂದೆ ವೀರಸ್ವಾಮಿರೆಡ್ಡಿ ಅವರ ಹತ್ಯೆ ಮನಸ್ಸಿಗೆ ತೀವ್ರ ಘಾಸಿ ಉಂಟು ಮಾಡಿದೆ.  ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಭಗವಂತ ಅವರ ಕುಟುಂಬದವರಿಗೆ ಈ ನೋವನ್ನು ಬರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಈ ದಾರುಣ ಹತ್ಯೆಗೈದ ಹಂತಕರನ್ನು ಪತ್ತೆ ಹಚ್ಚಿ ಅವರನ್ನು ಬಂಧಿಸಿ ಕಾನೂನಿಗೆ ಒಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಂಡು ಈ ಸಾವಿಗೆ ನ್ಯಾಯ ಕೊಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ’ ಎಂದಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ