ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ

ಬುಧವಾರ, 27 ಜುಲೈ 2022 (09:03 IST)
ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬೆಳ್ಳಾರೆ ಪೇಟೆಯಲ್ಲಿ ನಿನ್ನೆ ರಾತ್ರಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಕೋಳಿ ಅಂಗಡಿ ನಡೆಸುತ್ತಿದ್ದ ಪ್ರವೀಣ‍್ ನಿನ್ನೆ ರಾತ್ರಿ ಅಂಗಡಿ ಮುಚ್ಚುತ್ತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಿದ್ದಾರೆ. ಹಲ್ಲೆಯಿಂದ ಗಂಭೀರ ಗಾಯಗೊಂಡಿದ್ದ ಪ್ರವೀಣ್ ರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಇದೀಗ ಅವರ ಹತ್ಯೆ ಖಂಡಿಸಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಪ್ರವೀಣ್ ಹಂತಕರು ಕೇರಳದಿಂದ ಬಂದಿದ್ದರು ಎಂಬ ಸುದ್ದಿಯಿದೆ. ಹಂತಕರ ಪತ್ತೆಗಾಗಿ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ. ಪ್ರವೀಣ್ ಹತ್ಯೆ ಖಂಡಿಸಿ ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದು, ಹಂತಕರನ್ನು ಶೀಘ್ರದಲ್ಲೇ ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ