ಬಿ.ಕೆ ಹರಿಪ್ರಸಾದ್ ಈ ರೀತಿ ಮಾತಾಡೋದು ಸರಿಯಲ್ಲ: ದಿನೇಶ್ ಗುಂಡೂರಾವ್

ಮಂಗಳವಾರ, 12 ಸೆಪ್ಟಂಬರ್ 2023 (10:15 IST)
ಮಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ವಾಗ್ದಾಳಿ ನಡೆಸಿರುವುದಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೇಸರ ವ್ಯಕ್ತಪಡಿಸಿದ್ದಾರೆ.
 
ಮಂಗಳೂರಿನಲ್ಲಿ ಮಾತನಾಡಿದ ಅವರು, ಹರಿಪ್ರಸಾದ್ ಅವರಿಗೆ ಅಸಮಾಧಾನ ಯಾಕೆ ಅನ್ನೋದು ನನಗೆ ಗೊತ್ತಿಲ್ಲ. ಆದರೆ ಓರ್ವ ಪ್ರಮುಖ ರಾಜಕಾರಣಿ ಆ ಥರ ಮಾತನಾಡೋದು ಸರಿಯಲ್ಲ. ಅವರು ಯಾರ ಬಗ್ಗೆ, ಯಾಕೆ ಟೀಕೆ ಮಾಡ್ತಾರೆ ಅನ್ನೋದೇ ಅರ್ಥವಾಗ್ತಿಲ್ಲ ಎಂದರು.

ಹೈಕಮಾಂಡ್ ಈಗಾಗ್ಲೇ ಅವರಿಗೆ ಏನೂ ಮಾತನಾಡಬೇಡಿ ಎಂದು ಹೇಳಿದೆ. ಆದರೂ ಅವರು ಈ ರೀತಿ ಮಾತನಾಡ್ತಿರೋದು ಸರಿಯಲ್ಲ. ನಮೆಗೆಲ್ಲರಿಗೂ ಪಕ್ಷದಲ್ಲಿ ಸ್ಥಾನ ಸಿಗುತ್ತೆ ಮತ್ತು ಹೋಗುತ್ತೆ ಆದರೆ ಒಂದು ಸಾರ್ವಜನಿಕ ವೇದಿಕೆಯಲ್ಲಿ ಆ ರೀತಿ ಮಾತನಾಡಬಾರದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ