ಸಿಎಂ, ಸಿಎಂ ಆಪ್ತರ ತನಿಖೆಗೆ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯ

ಬುಧವಾರ, 7 ಡಿಸೆಂಬರ್ 2016 (14:18 IST)
ರಾಜ್ಯದಲ್ಲಿ ನಡೆದ ಬ್ರಹ್ಮಾಂಡ ಭ್ರಷ್ಟಾಚಾರದ ಬಗ್ಗೆ ಸಿಎಂ ಸಿದ್ದರಾಮಯ್ಯ ಮತ್ತು ಅವರ ಆಪ್ತರ ಕೈವಾಡಗಳ ಬಗ್ಗೆ ತನಿಖೆಯಾಗಲಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ.
 
ಸರಕಾರಿ ಅಧಿಕಾರಿಗಳಾದ ಚಿಕ್ಕರಾಯಪ್ಪ, ಜಯಚಂದ್ರ ಕಳೆದ ಮೂರು ವರ್ಷಗಳಿಂದ ರಾಜ್ಯ ಸರಕಾರದಲ್ಲಿ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದು, ಭಾರಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿ ನೂರಾರು ಕೋಟಿ ರೂಪಾಯಿಗಳ ಕಪ್ಪು ಹಣವನ್ನು ಹೊಂದಿರುವುದು ಬಹಿರಂಗವಾಗಿದೆ. ಅಂತಹ ಅಧಿಕಾರಿಗಳ ವಿರುದ್ಧ ಸಂಪೂರ್ಣ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.
 
ಅಧಿಕಾರಿಗಳ ಭ್ರಷ್ಟಾಚಾರದಲ್ಲಿ ಸಚಿವರ ಕೈವಾಡವಿದೆ ಎನ್ನುವುದು ಬಹಿರಂಗವಾಗಿದ್ದರೂ ಸಿಎಂ ಸಿದ್ದರಾಮಯ್ಯ ಯಾಕೆ ಮೌನವಾಗಿದ್ದಾರೆ? ಅವರು ಮೌನವಾಗಿರುವದನ್ನು ನೋಡಿದಲ್ಲಿ ಸಿಎಂ ಅವರದ್ದು ಕೈವಾಡವಿದೆ ಎನ್ನುವ ಅನುಮಾನ ಕಾಡುತ್ತಿದೆ ಎಂದು ಆರೋಪಿಸಿದ್ದಾರೆ.
 
ಕಪ್ಪುಹಣದ ವ್ಯವಹಾರದಲ್ಲಿ ಸಿಲುಕಿರುವ ಚಿಕ್ಕರಾಯಪ್ಪ ಮತ್ತು ಜಯಚಂದ್ರ ಮೂರು ವರ್ಷಗಳಿಂದ ಕರೆದಿರುವ ಟೆಂಡರ್‌ಗಳ ಬಗ್ಗೆ ತನಿಖೆಯಾಗಬೇಕು. ತನಿಖೆಯಾದಲ್ಲಿ ಹಿಂದಿರುವ ವ್ಯಕ್ತಿಗಳ ಬಣ್ಣ ಬಯಲಾಗಲಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ವೆಬ್ದುನಿಯಾವನ್ನು ಓದಿ