ಕೆಟ್ಟದಾಗಿ ವರ್ತಿಸಿ ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡ್ತಿರೋ ಚಾಲಕ
ವಿದ್ಯಾರ್ಥಿನಿ ಜೊತೆ ಅಸಭ್ಯ ವರ್ತನೆ ತೋರಿದ್ದಲ್ಲದೇ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಆರೋಪಿಸಿ ಪಾಲಕರು ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಷ್ಟೇ ಅಲ್ಲ ವಿದ್ಯಾರ್ಥಿನಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾನೆ ಎಂದು ಆರೋಪಿಸಿದ ವಿದ್ಯಾರ್ಥಿಯ ಪೋಷಕರು ಕೂಡಲೇ ವಾಹನ ಚಾಲಕನ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಆಗ್ರಹಿಸಿದರು.
ಬೆಳ್ಳಂಬೆಳಗ್ಗೆಯೇ ಶಾಲೆಗೆ ಆಗಮಿಸಿದ ಪಾಲಕರು, ಶಾಲಾ ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.