ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್

ಮಂಗಳವಾರ, 19 ಸೆಪ್ಟಂಬರ್ 2023 (19:40 IST)
ಪ್ರೇಮಿಗಳ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್​ ಮೇಲ್ ಮಾಡುತ್ತಿದ್ದವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಬೆಂಗಳೂರಿನ ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಕೆಂಚನಾಪುರದಲ್ಲಿರುವ ಹೋಟೆಲ್​ನಲ್ಲಿ ರಹಸ್ಯ ಕ್ಯಾಮೆರಾ ಇಟ್ಟು ಪ್ರೇಮಿಗಳ ವಿಡಿಯೋ ಸೆರೆ ಹಿಡಿದು ಬಳಿಕ ಬ್ಲ್ಯಾಕ್​ ಮೇಲ್​ ಮಾಡುತ್ತಿದ್ದ ನಯನಾ ಹಾಗೂ ಪಾರ್ಟ್ನರ್ ಕಿರಣ್ ಎನ್ನುವವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರೇಮಿಗಳಿಗೆ ರೂಮ್​ ವ್ಯವಸ್ಥೆ ಮಾಡಿಕೊಟ್ಟು ಇದೀಗ ಅವರೇ ಪ್ರೇಮಿಗಳ​ ಖಾಸಗಿ ವಿಡಿಯೋ ಇಟ್ಟುಕೊಂಡು ಲಕ್ಷ ಲಕ್ಷ ಹಣ ನೀಡುವಂತೆ ಬ್ಲ್ಯಾಕ್​​ ಮೇಲ್​ಗೆ ಇಳಿದಿದ್ದರು. ಕೆಂಗೇರಿ ಮುಖ್ಯರಸ್ತೆಯಲ್ಲಿರುವ ಶೆಟ್ಟಿ ಲಂಚ್ ಹೋಮ್ ಹೋಟೆಲ್​​ನಲ್ಲಿ ಪ್ರೇಮಿಗಳಿಗೆ ರೂಮ್​ ನೀಡಲಾಗಿತ್ತು. ಆದ್ರೆ, ರೂಮ್​ನಲ್ಲಿ ರಹಸ್ಯವಾಗಿ‌ ಕ್ಯಾಮೆರಾ ಇಟ್ಟಿದ್ದರು. ಬಳಿಕ ನಯನಾ ಹಾಗೂ ಪಾರ್ಟ್ನರ್ ಕಿರಣ್ ಎನ್ನುವವರು ಯುವತಿಗೆ ಬ್ಲ್ಯಾಕ್​ ಮೇಲ್ ಮಾಡಿ ಹಣಕ್ಕೆ ಪೀಡಿಸುತ್ತಿದ್ದರು. ಒಂದು ಲಕ್ಷ ಹಣ ನೀಡಬೇಕು. ಹಣ ಕೊಡದಿದ್ರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡ್ತೀನಿ. ನಿಮ್ಮ ಸಂಬಂಧಿಕರು ಹಾಗೂ ಸ್ನೇಹಿತರಿಗೆ ಕಳುಹಿಸುತ್ತೇನೆ ಎಂದು ಕಿರಣ್ ಬೆದರಿಕೆ ಹಾಕಿದ್ದ. ಇದರಿಂದ ಯುವತಿ ಹೆದರಿಕೊಂಡು ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಇದೀಗ ಈ ದೂರಿನ ಆಧಾರ ಮೇಲೆ ಪೊಲೀಸರು ನಯನಾ ಹಾಗೂ ಕಿರಣ್​ನನ್ನು ಬಂಧಿಸಿದ್ದಾರೆ. ಅಲ್ಲದೇ ಮೊಬೈಲ್ ವಶಕ್ಕೆ ಪಡೆದು ಯುವತಿಯ ವಿಡಿಯೋ ಡಿಲೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ