ಜೈಪುರ : ಮದುವೆಯಾಗುವುದಾಗಿ ನಂಬಿಸಿ ಹಲವಾರು ಮಹಿಳೆಯರ ಮೇಲೆ 26 ವರ್ಷದ ಯುವಕ ಅತ್ಯಾಚಾರವೆಸಗಿರುವುದಾಗಿ ಘಟನೆ ರಾಜಸ್ಥಾನದ ಸಿಕಾರ್ ಜಿಲ್ಲೆಯಲ್ಲಿ ನಡೆದಿದೆ.
ಆರೋಪಿಯನ್ನು ಸಂದೀಪ್ ಗೋದಾರ ಎಂದು ಗುರುತಿಸಲಾಗಿದ್ದು, ವಿಚ್ಛೇದಿತ, ಅಂಗವಿಕಲ ಮತ್ತು ಒಂಟಿ ಮಹಿಳೆಯರನ್ನೆ ಟಾರ್ಗೆಟ್ ಮಾಡಿಕೊಂಡು ಅತ್ಯಾಚಾರ ವೆಸಗಿ ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದನು.
ಆದರೀಗ ಈತನ ವಿರುದ್ಧ ಸಿಕರ್ನ ವಿವಾಹಿತ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.
ಆರೋಪಿ ಮದುವೆಯಾಗುವ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಎಸಗಿ ನಂತರ ತನನ್ ಅಶ್ಲೀಲ ಫೋಟೋಗಳನ್ನು ಮತ್ತು ವೀಡಿಯೋಗಳನ್ನು ಕ್ಲಿಕ್ಕಿಸಿಕೊಂಡು ಹಣಕ್ಕಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದನು ಎಂದು ಮಹಿಳೆ ಆರೋಪಿಸಿದ್ದಾರೆ.